ಎ.ಸೀತಾರಾಮ್ ರವರ ಸ್ವಾರತ್ಯತ್ವದಲ್ಲಿ ಮೂಡಿಬರುತ್ತಿರುವ "ಸುವರ್ಣ ಲೇಖನಿ"ಹಾಗು "ನ್ಯೂಸ್ ಕರ್ನಾಟಕ1"

ಸುದ್ಧಿ ಹಾಗು ಜಾಹಿರಾತಕ್ಕೆ ಸಂರ್ಪಕಿಸಿ +91 8553310400

2022- 23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 10ನೇ ತರಗತಿ ಮತ್ತು 12ನೇ ತರಗತಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ,ವಿದ್ಯಾರ್ಥಿನಿಯ ರಿಗೆ ಪ್ರತಿಭಾ ಪುರಸ್ಕಾರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದಲ್ಲಿರುವ ಮಹಂತಿನಮಠ ಧರ್ಮ ಸಂಸ್ಥೆಯ ಆವರಣದಲ್ಲಿ ಅಖಿಲ ಕರ್ನಾಟಕ ಮಿತ್ರ ಸಂಘದ ಆಶ್ರಯದಲ್ಲಿ 2022- 23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 10ನೇ ತರಗತಿ ಮತ್ತು 12ನೇ ತರಗತಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಇತ್ತೀಚೆಗೆ ಸರ್ಕಾರಿ ಸೇವೆಯಿಂದ ವಿಶ್ರಾಂತಿ ಪಡೆದ ದಂಪತಿಗಳಾದ ಕೆಎಚ್ ಚಂದ್ರಶೇಖರ್ ಮತ್ತು ಶ್ರೀಮತಿ ಓಂಕಾರಮ್ಮ ಮತ್ತು ಶಿವಾಜಿ ರವರನ್ನು ಸನ್ಮಾನಿಸಿ ಗೌರವಿಸಲಾಯಿತು
.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಕರ್ನಾಟಕ ಮಿತ್ರ ಸಂಘದ ಅಧ್ಯಕ್ಷರಾದ ಚಿ.ಮಾ.ಸುಧಾಕರ ರವರು ವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಹಡಪದ್ ಸೀನಿಯರ್ ಚೇಂಬರ್ ಅಧ್ಯಕ್ಷರಾದ ವಿಜಯಪುರ ಲೀಜನ್ ಅಧ್ಯಕ್ಷರಾದ ಡಾ. ಎಂ ಶಿವಕುಮಾರ್ ಜೇಸಿಐ ಅಧ್ಯಕ್ಷರಾದ ಮುನಿ ವೆಂಕಟರಮಣ ಶಿಕ್ಷಕರು ಹಾಗೂ ರಂಗಭೂಮಿ ಕಲಾವಿದರಾದ ಎ ಎಂ ನಾರಾಯಣಸ್ವಾಮಿ ಅಬ್ದುಲ್ ಸತ್ತಾರ್ ರವರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *

You may have missed