ಎ.ಸೀತಾರಾಮ್ ರವರ ಸ್ವಾರತ್ಯತ್ವದಲ್ಲಿ ಮೂಡಿಬರುತ್ತಿರುವ "ಸುವರ್ಣ ಲೇಖನಿ"ಹಾಗು "ನ್ಯೂಸ್ ಕರ್ನಾಟಕ1"

ಸುದ್ಧಿ ಹಾಗು ಜಾಹಿರಾತಕ್ಕೆ ಸಂರ್ಪಕಿಸಿ +91 8553310400

ವಿವಿಧ ಅಂಗಡಿ ಮುಂಗಟ್ಟುಗಳು ಮೇಲೆ ಕಾರ್ಯಾಚರಣೆ: ಒಂದು ಬಾಲಕಾರ್ಮಿಕ ಮತ್ತು ಹತ್ತು ಕಿಶೋರ ಕಾರ್ಮಿಕರ ರಕ್ಷಣೆ


ಬೆಂಗಳೂರು ಗ್ರಾಮಾಂತರ ಜಿಲ್ಲೆ ,ಹೊಸಕೋಟೆ ಮತ್ತು ನೆಲಮಂಗಲ ತಾಲೂಕಿನಲ್ಲಿ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ನೇಮಿಸಿಕೊಂಡ ವಿವಿಧ ಅಂಗಡಿಗಳು, ಬೇಕರಿಗಳು, ಗ್ಯಾರೇಜ್‌ಗಳು ಚಿಕನ್ ಮತ್ತು ಮಟನ್ ಸ್ಟಾಲ್‌ಗಳು ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳ ಮೇಲೆ ತಂಡವು ಅನಿರೀಕ್ಷಿತ ಕಾರ್ಯಾಚರಣೆ ನಡೆಸಿ 01 ಬಾಲಕಾರ್ಮಿಕ ಮತ್ತು 10 ಕಿಶೋರ ಕಾರ್ಮಿಕರನ್ನು ರಕ್ಷಿಸಿದೆ.
ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಮಕ್ಕಳ ಸಹಾಯವಾಣಿ 1098 ಇಲಾಖೆಗಳ ಅಧಿಕಾರಿಗಳು ಜಂಟಿಯಾಗಿ ಕಾರ್ಯಚರಣೆ ನಡೆಸಿ ರಕ್ಷಿಸಿದ್ದಾರೆ.

ರಕ್ಷಿಸಲಾದ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿ, ಪೋಷಕರ ವಶಕ್ಕೆ ಹಸ್ತಾಂತರಿಸಲಾಯಿತು.
ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016
ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು 14 ವರ್ಷದೊಳಗಿನ(ಬಾಲ ಕಾರ್ಮಿಕ) ಯಾವುದೇ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 18 ವರ್ಷದೊಳಗಿನ(ಕಿಶೋರ ಕಾರ್ಮಿಕ) ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿದಲ್ಲಿ ಅಂತಹವರಿಗೆ ಕನಿಷ್ಠ 06 ತಿಂಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ಗರಿಷ್ಠ 02 ವರ್ಷದವರೆಗೂ ಜೈಲು ಶಿಕ್ಷೆ ಹಾಗೂ ರೂ. 20,000/- ಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ರೂ. 50,000/- ಗಳ ವರೆಗೆ ಹೆಚ್ಚಿಸಬಹುದಾದಂತಹ ದಂಡ ಅಥವಾ ಎರಡನ್ನು ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ.

ಸಾರ್ವಜನಿಕರ ಗಮನಕ್ಕೆ ಸುತ್ತಮುತ್ತಲಿರುವ ಯಾವುದೇ ಅಂಗಡಿಗಳು, ಬೇಕರಿಗಳು, ಗ್ಯಾರೇಜ್ ಗಳು, ಚಿಕನ್ ಮತ್ತು ಮಟನ್ ಸ್ಟಾಲ್ ಗಳು ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳು ಮಕ್ಕಳನ್ನು ನೇಮಿಸಿ ಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಮತ್ತು ಪೊಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ 112 ಕ್ಕೆ ಸಾರ್ವಜನಿಕರು ಕರೆಮಾಡಿ ಮಾಹಿತಿ ನೀಡಿ ಮಕ್ಕಳನ್ನು ರಕ್ಷಿಸಲು ಸಹಕರಿಸಬಹುದು.
ಕಾರ್ಯಾಚರಣೆಯಲ್ಲಿ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ರಾಮು ಮಲ್ಲಯ್ಯ, ಜಿಲ್ಲಾ ಕಾರ್ಮಿಕ ಅಧಿಕಾರಿ ನಾಗೇಂದ್ರ ಹೆಚ್.ಆರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನಿತಾ ಲಕ್ಷ್ಮಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಸುಬ್ಬರಾವ್ ಎಸ್, ಮಕ್ಕಳ ಸಹಾಯವಾಣಿಯ ಜಿಲ್ಲಾ ಸಂಯೋಜಕ ಮಂಜುನಾಥ್, ಕಾರ್ಮಿಕ ನಿರೀಕ್ಷಕ ಯತೀಶ್ ಕುಮಾರ್ ಹಾಗೂ ಧನಪಾಲ್ ನಾಯಕ್, ಸಿ.ಆರ್.ಪಿ. ಪರಮೇಶ್ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ, ಮತ್ತಿತರರು ಹಾಜರಿದ್ದರು.

Leave a Reply

Your email address will not be published. Required fields are marked *

You may have missed