ಎ.ಸೀತಾರಾಮ್ ರವರ ಸ್ವಾರತ್ಯತ್ವದಲ್ಲಿ ಮೂಡಿಬರುತ್ತಿರುವ "ಸುವರ್ಣ ಲೇಖನಿ"ಹಾಗು "ನ್ಯೂಸ್ ಕರ್ನಾಟಕ1"

ಸುದ್ಧಿ ಹಾಗು ಜಾಹಿರಾತಕ್ಕೆ ಸಂರ್ಪಕಿಸಿ +91 8553310400

“ನಾಡಪ್ರಭು ಶ್ರೀ ಕೆಂಪೇಗೌಡ ಜಯಂತೋತ್ಸವ” ಅಂಗವಾಗಿ ಜೂನ್ 27 ರಂದು ಬೆಳಗ್ಗೆ 09.00 ಗಂಟೆಗೆಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ 108 ಅಡಿಗಳ ಶ್ರೀ ಕೆಂಪೇಗೌಡ ರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವವನ್ನು ಸಲ್ಲಿಸಲಾಗುವುದು.


ದಿನಾಂಕ 27.06.2023 ರಂದು ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿಯ ಅಂಗವಾಗಿ ಮಾನ್ಯ ಉಸ್ತುವಾರಿ ಸಚಿವರು, ಬೆಂಗಳೂರು ಗ್ರಾಮಾಂತರ ಜಿಲ್ಲೆ  ಹಾಗೂ ಮಾನ್ಯ ಶಾಸಕರು ದೇವನಹಳ್ಳಿ ವಿಧಾನಸಭಾ ಕ್ಷೇತ್ರ ರವರು ಮತ್ತು ಮಾನ್ಯ ಜಿಲ್ಲಾಧಿಕಾರಿಗಳು ಬೆಳಗ್ಗೆ 8.30 ಗಂಟೆಗೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ 108 ಅಡಿಗಳ ಶ್ರೀ ಕೆಂಪೇಗೌಡ ರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವವನ್ನು ಸಲ್ಲಿಸಿ,

ನಂತರ ಬೆಳಗ್ಗೆ 9-00 ಗಂಟೆಗೆ ದೇವನಹಳ್ಳಿ ಪಟ್ಟಣದ ಇತಿಹಾಸ  ಪ್ರಸಿದ್ಧ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ದೇವರಿಗೆ ಪೂಜೆ ಪೂಜೆ ನೆರವೇರಿಸುವುದರ ಮುಖಾಂತರ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಹೊರಟು ಬೆಳಗ್ಗೆ 10-00 ಗಂಟೆಗೆ  ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ವೇದಿಕೆ ಕಾರ್ಯಕ್ರಮದ ಉದ್ಘಾಟನೆ ಮತ್ತು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಆದ್ದರಿಂದ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು  ಕಡ್ಡಾಯವಾಗಿ ಹಾಜರಿರತಕ್ಕದ್ದು ಹಾಗೂ ಒಕ್ಕಲಿಗ ಸಮುದಾಯದ ಎಲ್ಲಾ ಮುಖಂಡರುಗಳು, ಪತ್ರಿಕಾ ಮತ್ತು ದೃಶ್ಯ ಮಾಧ್ಯಮದವರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಈ ಮೂಲಕ ಕೋರಿದೆ.

ಮಾಧ್ಯಮ ಆಹ್ವಾನ*
  ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತ ಇಲಾಖೆ ವತಿಯಿಂದ “ನಾಡಪ್ರಭು ಶ್ರೀ ಕೆಂಪೇಗೌಡ ಜಯಂತೋತ್ಸವ” ಕಾರ್ಯಕ್ರಮವನ್ನು ಜೂನ್ 27 ರಂದು ಬೆಳಗ್ಗೆ 10.00 ಗಂಟೆಗೆ ದೇವನಹಳ್ಳಿ ಟೌನ್ ಡಾ. ಬಿಆರ್.ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
  ಜೂನ್ 27 ರಂದು ಬೆಳಗ್ಗೆ 09.00 ಗಂಟೆಗೆ ವೇಣುಗೋಪಾಲ ಸ್ವಾಮಿ ದೇವಾಲಯದಿಂದ ಡಾ. ಬಿ.ಆರ್.ಅಂಬೇಡ್ಕರ್ ಭವನದವರೆಗೆ ಮೆರವಣಿಗೆ ನಡೆಯಲಿದೆ.
*ಜಿಲ್ಲೆಯ ಮಾಧ್ಯಮ ಪ್ರತಿನಿಧಿಗಳು ಭಾಗವಹಿಸಲು ಕೋರಿದೆ*

ಮಾಧ್ಯಮ ಆಹ್ವಾನ*
  “ನಾಡಪ್ರಭು ಶ್ರೀ ಕೆಂಪೇಗೌಡ ಜಯಂತೋತ್ಸವ” ಅಂಗವಾಗಿ ಜೂನ್ 27 ರಂದು ಬೆಳಗ್ಗೆ 09.00 ಗಂಟೆಗೆ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ “ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಭವ್ಯ ಕಂಚಿನ ಪ್ರಗತಿಯ ಪ್ರತಿಮೆ”ಗೆ ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಪುಷ್ಪನಮನ ಸಲ್ಲಿಸಲಿದ್ದಾರೆ.
*ಮಾಧ್ಯಮ ಪ್ರತಿನಿಧಿಗಳು ಆಗಮಿಸಲು ಕೋರಿದೆ*

Leave a Reply

Your email address will not be published. Required fields are marked *

You may have missed