ಎ.ಸೀತಾರಾಮ್ ರವರ ಸ್ವಾರತ್ಯತ್ವದಲ್ಲಿ ಮೂಡಿಬರುತ್ತಿರುವ "ಸುವರ್ಣ ಲೇಖನಿ"ಹಾಗು "ನ್ಯೂಸ್ ಕರ್ನಾಟಕ1"

ಸುದ್ಧಿ ಹಾಗು ಜಾಹಿರಾತಕ್ಕೆ ಸಂರ್ಪಕಿಸಿ +91 8553310400

ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ(ಇಗ್ನೋ)ದಿಂದ ವಿವಿಧ ಕೋರ್ಸ್‌ಗಳ ಪ್ರವೇಶಾತಿಗಾಗಿ ಅರ್ಜಿ ಅಹ್ವಾನ

ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ(ಇಗ್ನೋ)ದಿಂದ ವಿವಿಧ ಕೋರ್ಸ್‌ಗಳ ಪ್ರವೇಶಾತಿಗಾಗಿ ಅರ್ಜಿ ಅಹ್ವಾನ
  ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 14 ಭಾರತ ಸರ್ಕಾರದ ಶಿಕ್ಷಣ ಸಚಿವಾಲಯ ಮತ್ತು ನ್ಯಾಕ್ ಎ++(NAAC A++) ಮಾನ್ಯತೆ ಪಡೆದ ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ (IGNOU-ಇಗ್ನೋ)ದ 2023ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೋಮಾ, ಡಿಪ್ಲೋಮಾ ಮತ್ತು ಪ್ರಮಾಣ ಪತ್ರ ಮಟ್ಟದ ಕಾರ್ಯಕ್ರಮಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ ಬೆಂಗಳೂರು ಪ್ರಾದೇಶಿಕ ಕೇಂದ್ರದ ಹಿರಿಯ ಪ್ರಾದೇಶಿಕ ನಿರ್ದೇಶಕಿ ಡಾ. ಎಸ್.ರಾಧಾ ಅವರು ತಿಳಿಸಿದ್ದಾರೆ.
 

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ದೈಹಿಕ ಅಶಕ್ತ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಮತ್ತು ಶುಲ್ಕ ಮರು ಪಾವತಿ ಸೌಲಭ್ಯ ಪಡೆಯಲು ಅವಕಾಶವಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡ (ಎಸ್‌ಸಿ/ಎಸ್ಟಿ) ವಿದ್ಯಾರ್ಥಿಗಳು ಸಾಮಾನ್ಯ ಬಿ.ಕಾಂ, ಬಿ.ಎ. ಮುತ್ತು ಬಿ.ಎಸ್ಸಿ ಗೆ ಅರ್ಜಿ ಸಲ್ಲಿಸುವಾಗ ಪರಿಶಿಷ್ಟ ಜಾತಿ ಉಪಜಾತಿ ಯೋಜನೆ(SCSP) ಮತ್ತು ಬುಡಕಟ್ಟು(TSP) ಅಡಿಯಲ್ಲಿ ಶುಲ್ಕ ವಿನಾಯಿತಿ ಪಡೆಯಬಹುದು. ಅರ್ಹ ವಿದ್ಯಾರ್ಥಿಗಳು ಭಾರತ ಸರ್ಕಾರದ ವಿದ್ಯಾರ್ಥಿಗ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಮತ್ತು ವಿದ್ಯಾ ಲಕ್ಷ್ಮಿ ಪೋರ್ಟಲ್ ಮೂಲಕ ಶಿಕ್ಷಣ ಸಾಲ ಸೌಲಭ್ಯವನ್ನು ಸಹ ಪಡೆಯಬಹುದು.
 

ಜುಲೈನಲ್ಲಿ ನಡೆಯುವ ಪ್ರವೇಶಕ್ಕಾಗಿ ಅನ್‌ಲೈನ್‌ನ ಮೂಲಕ ಅರ್ಜಿ ಸಲ್ಲಿಸಲು https://ignouadmission.samarth.edu.in/ ಲಿಂಕ್ ಕ್ಲಿಕ್ ಮಾಡಿ ಮತ್ತು www.ignou.ac.in ಗೆ ಭೇಟಿ ನೀಡಿ ಸಮಗ್ರ ವಿವರಗಳನ್ನು ಪಡೆಯಬಹುದು. AICTE ಪರಿಷ್ಕೃತ ನಿಯಮಗಳ ಪ್ರಕಾರ ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ ಇಲ್ಲದ ಎಂ.ಬಿಎ ಪದವಿಗೆ ನೇರ ಪ್ರವೇಶ ಒದಗಿಸಲಾಗುವುದು. ಡಿಜಿಟಲ್ ಮಾಧ್ಯಮ, ಎಲೆಕ್ಟ್ರಾನಿಕ್ ಮಾಧ್ಯಮ, ಅಭಿವೃದ್ಧಿ ಪತ್ರಿಕೋದ್ಯಮದ ಅತ್ಯಂತ ಉಪಯುಕ್ತ ಮತ್ತು ಉದ್ಯಮದ ಅಗತ್ಯ ಕಾರ್ಯಕ್ರಮಗಳನ್ನು ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ ಆರಂಭಿಸಿದ್ದು, ವಿದ್ಯಾರ್ಥಿಗಳು ತಮ್ಮ ಅಸಕ್ತಿಗೆ ಅನುಗುಣವಾಗಿ ಆಯ್ಕೆ ಮಾಡಿಕೊಳ್ಳಬಹುದು.
  ಅರ್ಹತಾ ಷರತ್ತುಗಳು ಮತ್ತು ಇತರ ವಿವರಗಳಿಗಾಗಿ, ಇ-ಪ್ರಾಸ್ಪೆಕ್ಟಸ್ ಅನ್ನು
http://www.ignou.ac.in/userfiles/Common-Prospectus-English.pdf ನಲ್ಲಿ ಡೌನ್ಲೋಡ್ ಮಾಡಿ. ಹೆಚ್ಚಿನ ಮಾಹಿತಿಗಾಗಿ 9449337272 ಗೆ Whatsapp SMS ಅಥವಾ 080-29607272 ಗೆ ಕರೆ ಮಾಡಬಹುದು, [email protected] ಗೆ ಮೇಲ್ ಮಾಡುವ ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಇಗ್ನೋದ ಹಿರಿಯ ಪ್ರಾದೇಶಿಕ ನಿರ್ದೇಶಕಿ ಡಾ. ಎಸ್.ರಾಧಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ ಬೆಂಗಳೂರು ಪ್ರಾದೇಶಿಕ ಕೇಂದ್ರದ ಹಿರಿಯ ಪ್ರಾದೇಶಿಕ ನಿರ್ದೇಶಕಿ ಡಾ. ಎಸ್.ರಾಧಾ

Leave a Reply

Your email address will not be published. Required fields are marked *

You may have missed