ಎ.ಸೀತಾರಾಮ್ ರವರ ಸ್ವಾರತ್ಯತ್ವದಲ್ಲಿ ಮೂಡಿಬರುತ್ತಿರುವ "ಸುವರ್ಣ ಲೇಖನಿ"ಹಾಗು "ನ್ಯೂಸ್ ಕರ್ನಾಟಕ1"

ಸುದ್ಧಿ ಹಾಗು ಜಾಹಿರಾತಕ್ಕೆ ಸಂರ್ಪಕಿಸಿ +91 8553310400

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಲು ಜಿಲ್ಲಾಧಿಕಾರಿ ಡಾ. ಶಿವಶಂಕರ ಕರೆ

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಲು ಜಿಲ್ಲಾಧಿಕಾರಿ ಡಾ. ಶಿವಶಂಕರ ಕರೆ
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 24 2023 ನೇ ಸಾಲಿನ “ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು 2023 ರ ಮುಂಗಾರು ಹಂಗಾಮಿಗೆ ಕೃಷಿ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿದ್ದು ಅಧಿಸೂಚಿತ ಬೆಳೆಗಳನ್ನು ಬೆಳೆಯುವ ರೈತರು ಈ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳುವಂತೆ ರೈತರಲ್ಲಿ ಅರಿವು ಮೂಡಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ಜಿಲ್ಲಾಮಟ್ಟದ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಮುಖ ಬೆಳೆಗಳಾದ ರಾಗಿ, ಮುಸುಕಿನ ಜೋಳ, ನೆಲಗಡಲೆ ಬೆಳೆ ಬೆಳೆಯುವ ರೈತರು ಈ ಯೋಜನೆಯಲ್ಲಿ ಪಾಲ್ಗೊಳ್ಳಬಹುದಾಗಿರುತ್ತದೆ. ಬೆಳೆ ಸಾಲ ಪಡೆದ ರೈತರಿಗೆ ನೋಂದಣಿಯು ಐಚ್ಛಿಕವಾಗಿದ್ದು ಸಂಬಂಧಿಸಿದ ಬ್ಯಾಂಕ್ ಶಾಖೆಗೆ ಲಿಖಿತ ರೂಪದಲ್ಲಿ ದೃಢೀಕರಣ ಸಲ್ಲಿಸಬೇಕಾಗಿರುತ್ತದೆ. ನೆಲಗಡಲೆ ಬೆಳೆ ನೋಂದಣಿಗೆ ಜುಲೈ 31 ಕೊನೆಯ ದಿನವಾಗಿದ್ದು, ರಾಗಿ ಮತ್ತು ಮುಸುಕಿನ ಜೋಳ ಬೆಳೆಗಳಿಗೆ ನೋಂದಣಿ ಮಾಡಿಕೊಳ್ಳಲು ಆಗಸ್ಟ್ 16 ಕೊನೆಯ ದಿನವಾಗಿದೆ ಎಂದರು.

ತೋಟಗಾರಿಕೆ ಇಲಾಖೆ ವತಿಯಿಂದ 2023-24ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಮಾವು ಮತ್ತು ದ್ರಾಕ್ಷಿ ಬೆಳೆಗಳಿಗೆ ವಿಮೆ ನೋಂದಾಯಿಸಲು ಅವಕಾಶವಿದೆ, ಆದ್ದರಿಂದ ಮಾವು ಹಾಗೂ ದ್ರಾಕ್ಷಿ ಬೆಳೆಗಳನ್ನು ಬೆಳೆಯುವ ರೈತರು ಜುಲೈ 31 ರೊಳಗೆ ನೋಂದಾಯಿಸಿಕೊಳ್ಳಬಹುದು ಎಂದರು.
ಈ ನಿಟ್ಟಿನಲ್ಲಿ ರೈತರು ಬೆಳೆವಿಮೆಯಲ್ಲಿ ನೋಂದಾಯಿಸಿಕೊಳ್ಳಲು ತಾಲ್ಲೂಕು, ಹೋಬಳಿ, ಗ್ರಾಮಪಂಚಾಯಿತಿ ಮಟ್ಟದಲ್ಲಿ, ರೈತ ಸಂಪರ್ಕ ಕೇಂದ್ರಗಳಲ್ಲಿ ಭಿತ್ತಿಪತ್ರಗಳು ಹಾಗೂ ಕರಪತ್ರಗಳನ್ನು ಹಂಚುವ ಮೂಲಕ ರೈತರಲ್ಲಿ ಅರಿವು ಮೂಡಿಸಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಲು ಕ್ರಮವಹಿಸುವಂತೆ ತಾಲ್ಲೂಕು ಮತ್ತು ಹೋಬಳಿ ಮಟ್ಟದ ಅಧಿಕಾರಿಗಳು, ಬ್ಯಾಂಕ್ ಹಾಗೂ ಸಹಕಾರ ಸಂಘಗಳ ಉಪ ನಿಬಂಧಕರಿಗೆ ಸೂಚಿಸಿದರು.

ಸಭೆಯಲ್ಲಿ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಹಾಗೂ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಗಳ ಕರಪತ್ರ ಹಾಗೂ ಭಿತ್ತಿಪತ್ರಗಳನ್ನು ಜಿಲ್ಲಾಧಿಕಾರಿಗಳು ಬಿಡುಗಡೆಗೊಳಿಸಿದರು.ಸಭೆಯಲ್ಲಿ ಕೃಷಿ ಇಲಾಖೆಯ ಉಪ ನಿರ್ದೇಶಕರಾದ ವಿನುತ, ಎಂ.ಸಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಗುಣವಂತ ಜೆ ಸೇರಿದಂತೆ ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ವಿಮೆ ಕಂಪನಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You may have missed