ಎ.ಸೀತಾರಾಮ್ ರವರ ಸ್ವಾರತ್ಯತ್ವದಲ್ಲಿ ಮೂಡಿಬರುತ್ತಿರುವ "ಸುವರ್ಣ ಲೇಖನಿ"ಹಾಗು "ನ್ಯೂಸ್ ಕರ್ನಾಟಕ1"

ಸುದ್ಧಿ ಹಾಗು ಜಾಹಿರಾತಕ್ಕೆ ಸಂರ್ಪಕಿಸಿ +91 8553310400

ಕನ್ನಡ ರಾಜ್ಯೋತ್ಸವ ಅರ್ಥ ಪೂರ್ಣ ಆಚರಣೆಗೆ ಸಿದ್ಧತೆ ಕೈಗೊಳ್ಳಿ:ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 18 (ಕರ್ನಾಟಕ ವಾರ್ತೆ): ನವೆಂಬರ್ 01 ರಂದು ದೇವನಹಳ್ಳಿ ಟೌನ್ ನ ಸರ್ಕಾರಿ ಪದವಿ ಪೂರ್ವ ಕಾಲೇಜು ಆಟದ ಮೈದಾನದಲ್ಲಿ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಕಾರ್ಯಕ್ರಮಕ್ಕೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್ ಅವರು ಸೂಚನೆ ನೀಡಿದರು.


ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಕನ್ನಡ ರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಕರೆಯಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಎಲ್ಲರಿಗೂ ತಲುಪಿಸಿ ಎಂದು ದೇವನಹಳ್ಳಿ ತಾಲ್ಲೂಕು ತಹಶೀಲ್ದಾರ್ ಗೆ ಸೂಚಿಸಿದರು. ವೇದಿಕೆ ಮತ್ತು ಧ್ವಜ ಕಟ್ಟೆ ಅಲಂಕಾರ, ಪಥ ಸಂಚಲನ, ವಿಡಿಯೋ ಮತ್ತು ಛಾಯಚಿತ್ರ, ಕನ್ನಡ ಸಾಹಿತ್ಯ ಪುಸ್ತಕ, ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ, ಲಘು ಉಪಹಾರ, ನೀರಿನ ವ್ಯವಸ್ಥೆ, ಇತ್ಯಾದಿ ವ್ಯವಸ್ಥೆಯನ್ನು ಸಂಬಂಧಪಟ್ಟ ಇಲಾಖೆಗಳು ಕೈಗೊಳ್ಳುವಂತೆ ಸೂಚಿಸಿದರು.


ಕನ್ನಡ ರಾಜ್ಯೋತ್ಸವ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಗಣ್ಯರನ್ನು ಆಯ್ಕೆ ಮಾಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲು ವಿವಿಧ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದವರಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಯನ್ನು ಸ್ವ ವಿವರಗಳೊಂದಿಗೆ ಅಕ್ಟೋಬರ್ 25 ರಂದು ಸಂಜೆ 5 ಗಂಟೆಯ ಒಳಗಾಗಿ ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ ಇಲ್ಲಿಗೆ ಸಲ್ಲಿಸಲು ಅಗತ್ಯ ಕ್ರಮವಹಿಸಿ ಎಂದು ತಿಳಿಸಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ರವಿ ಕುಮಾರ್ ಡಿ.ಎಂ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೃಷ್ಣಪ್ಪ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

You may have missed