ಜನನ ಮರಣ ನೋಂದಣಿಗೆ ಪರಿಶೀಲನೆ ಕಡ್ಡಾಯ:ಜಿಲ್ಲಾಜನನ ಮರಣ ನೋಂದಣಿಗೆ ಪರಿಶೀಲನೆ ಕಡ್ಡಾಯ:ಜಿಲ್ಲಾಧಿಕಾರಿ ಡಾ.ಶಿವಶಂಕರ್ ಎನ್
ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 18ಜನನ ಮರಣ ನೋಂದಣಿಯಲ್ಲಿ ಜನನ ಮರಣ ನೋಂದಣಾಧಿಕಾರಿಗಳು ಹಾಗೂ ಜನನ ಮರಣ ಉಪ ನೋಂದಣಾಧಿಕಾರಿಗಳು ಸರ್ಕಾರದ ಅದೇಶವನ್ನು ಕಟ್ಟು ನಿಟ್ಟಾಗಿ ಪರಿಶೀಲಿಸಿ ಜನನ ಮರಣ ನೋಂದಣಿಯನ್ನು ನಿಯಮಾನುಸಾರ ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಯವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ್ ಎನ್ ಅವರು ನಿರ್ದೇಶನ ನೀಡಿದರು.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 2023-24 ನೇ ಸಾಲಿನ ತ್ರೈಮಾಸಿಕ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
2023 ನೇ ಸಾಲಿನ ಜನವರಿ ಮಾಹೆಯಿಂದ ಅಕ್ಟೋಬರ್ ಮಾಹೆಯವರೆಗೆ 8361 ಜನನ ಹಾಗೂ 6871 ಮರಣ ಸೇರಿ ಒಟ್ಟು 15232 ಜನನ-ಮರಣ ನೋಂದಣಿಯಾಗಿದೆ. ಜನನ ಮರಣ ನೋಂದಣಿಯು ಪಾರದರ್ಶಕವಾಗಿ ನಡೆಯಬೇಕು. ಜಿಲ್ಲೆಯಲ್ಲಿರುವ ಎಲ್ಲಾ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರು, ಸ್ಥಳೀಯ ಸಂಸ್ಥೆಗಳಲ್ಲಿ ಜನನ ಮರಣ ನೋಂದಣಿ/ ಉಪ ನೋಂದಣಿ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಜನನ ಮರಣ ಘಟಕಗಳಲ್ಲಿ ಕಡ್ಡಾಯವಾಗಿ ಪರಿಶೀಲನೆ ನಡೆಸಿ ಆನ್ ಲೈನ್ ನಲ್ಲಿ ನಿಗದಿತ ಸಮಯದೊಳಗೆ ನೋಂದಾಯಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿರುವ ಆಯಾ ತಾಲ್ಲೂಕಿನ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ತಹಶೀಲ್ದಾರ್, ತಾಲ್ಲೂಕು ಆರೋಗ್ಯಾಧಿಕಾರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕಾಲ ಕಾಲಕ್ಕೆ ಭೇಟಿ ನೀಡಿ ಜನನ ಮರಣ ನೋಂದಣಿ ಘಟಕಗಳನ್ನು ತಪಾಸಣೆ ಮಾಡಬೇಕು. ಪ್ರತಿ ತಿಂಗಳಿಗೊಮ್ಮೆ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಜನನ ಮರಣ ವಿಷಯಕ್ಕೆ ಸಂಬಂಧಿಸಿದಂತೆ ತಾಲ್ಲೂಕು ಮಟ್ಟದ ಸಮನ್ವಯ ಸಮಿತಿ ಸಭೆಯನ್ನು ನಡೆಸಿ ವರದಿ ನೀಡಬೇಕು ಎಂದು ಹೇಳಿದರು.
2023-24 ನೇ ಸಾಲಿನ ಮುಂಗಾರು ಋತುವಿನ ಮರುಹೊಂದಾಣಿಕೆ ವರದಿಯನ್ನು ಪರಿಶೀಲಿಸಲು ಹಾಗೂ ಬೆಳೆ ಕಟಾವು ಪ್ರಯೋಗಗಳ ನಮೂನೆ -1 ಮತ್ತು ನಮೂನೆ – 2 ಅನ್ನು ಮತ್ತು ಬೆಳೆ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳುವಾಗ ನಿರೀಕ್ಷಿತ ಕಟಾವು ದಿನಾಂಕವನ್ನು ಗಮನದಲ್ಲಿಟ್ಟಿಕೊಂಡು , ರೈತರೊಂದಿಗೆ ನೇರ ಸಂಪರ್ಕದಿಂದಿದ್ದು,ಯಾವುದೇ ಪ್ರಯೋಗಗಳು ನಷ್ಟ ಗೊಳ್ಳದಂತೆ ಕ್ರಮವಹಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಲಕ್ಷ್ಮೀಕಾಂತ, ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯಿತ್ರಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಗುಣವಂತ, ಜಿಲ್ಲಾ ಸಾಂಖ್ಯಿಕ ಇಲಾಖೆ ಸಹಾಯಕ ನಿರ್ದೇಶಕಿ ಲೀಲೊದಯ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಹೇಮಾವತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾಂಖ್ಯಿಕ ಇಲಾಖೆಯ ತಾಲ್ಲೂಕು ಮಟ್ಟದ ಗಣತಿದಾರರು ಮತ್ತು ಸಾಂಖ್ಯಿಕ ನಿರೀಕ್ಷಕರು, ಸಿಬ್ಬಂದಿ ಉಪಸ್ಥಿತರಿದ್ದರು.