ಜಿಲ್ಲಾ ತಂಬಾಕು ನಿಯಂತ್ರಣ ಘಟಕ ದಾಳಿ: ಪ್ರಕರಣ ದಾಖಲು
ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 24 ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಜಿಲ್ಲಾ ಮಟ್ಟದ ತನಿಖಾ ತಂಡದ ವತಿಯಿಂದ ಇಂದು COTPA-2003
ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡುವ ನಿಟ್ಟಿನಲ್ಲಿ COTPA ದಾಳಿಯನ್ನು ನಡೆಸಿದ್ದು, ದಾಳಿಯಲ್ಲಿ ಸೆಕ್ಷನ್ 4ರ ಅಡಿಯಲ್ಲಿ ಒಟ್ಟು 15 ಪ್ರಕರಣಗಳನ್ನು ದಾಖಲಿಸಿ 3500 ರೂಗಳ ದಂಡವನ್ನು ಸಂಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರರಾದ ಡಾ.ವಿದ್ಯಾ ರಾಣಿ ಪಿ.ಎಸ್, ಆರೋಗ್ಯ ನಿರೀಕ್ಷಣಾಧಿಕಾರಿ ಶಿವಕುಮಾರ್, ಆರೋಗ್ಯ ಸಿಬ್ಬಂದಿ ಧನಂಜಯ್ ಹಾಗೂ ಪೊಲೀಸ್ ಸಿಬ್ಬಂದಿ ನಾಗರಾಜು ಹಾಜರಿದ್ದರು.