ಎ.ಸೀತಾರಾಮ್ ರವರ ಸ್ವಾರತ್ಯತ್ವದಲ್ಲಿ ಮೂಡಿಬರುತ್ತಿರುವ "ಸುವರ್ಣ ಲೇಖನಿ"ಹಾಗು "ನ್ಯೂಸ್ ಕರ್ನಾಟಕ1"

ಸುದ್ಧಿ ಹಾಗು ಜಾಹಿರಾತಕ್ಕೆ ಸಂರ್ಪಕಿಸಿ +91 8553310400

ಡಿಸೆಂಬರ್ 01 ರಿಂದ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ:ಜಿಲ್ಲಾಧಿಕಾರಿ ಡಾ.ಶಿವಶಂಕರ್. ಎನ್

ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 21ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಶಿವಶಂಕರ್ ಎನ್ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.


ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಮೊದಲನೆಯ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ಪ್ರತಿ ಕ್ವಿಂಟಾಲ್ ರಾಗಿಗೆ 3846 ರೂಪಾಯಿ ಬೆಂಬಲ ಬೆಲೆಯನ್ನು ಸರ್ಕಾರ ನಿಗದಿ ಪಡಿಸಿದೆ. ಕನಿಷ್ಟ ಬೆಂಬಲ ಯೋಜನೆಯಡಿ ರಾಗಿ ಖರೀದಿಗೆ ಸಂಬಂಧಿಸಿದಂತೆ ಸಂಗ್ರಹಣಾ ಏಜೆನ್ಸಿಗಳು ಪ್ರತಿ ತಾಲ್ಲೂಕು ಹಂತದಲ್ಲಿ ಅಗತ್ಯಕ್ಕೆ ತಕ್ಕಂತೆ ಖರೀದಿ ಕೇಂದ್ರಗಳನ್ನು ತೆರೆಯಬೇಕು, ರಾಗಿ ಖರೀದಿಗೆ ಸಂಬಂಧಿಸಿದಂತೆ ನೋಂದಣಿ ಕಾರ್ಯಕ್ಕೆ ನಿಗದಿತ ಸ್ಥಳಗಳನ್ನು ಗುರ್ತಿಸಿ ರೈತರಿಗೆ ಮುಂಚಿತವಾಗಿ ಮಾಹಿತಿ ನೀಡಬೇಕು. ನೋಂದಣಿಗೆ ಯಾವುದೇ ಸಮಸ್ಯೆ ಆಗದಂತೆ ಕಂಪ್ಯೂಟರ್ ಗಳು, ಇಂಟರ್ನೆಟ್ ವ್ಯವಸ್ಥೆ ಸೇರಿದಂತೆ ಅಗತ್ಯ ಸಿಬ್ಬಂದಿ ನಿಯೋಜಿಸಿ. ರೈತರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಸಮಸ್ಯೆ ಆಗದಂತೆ ನೋಡಿಕೊಳ್ಳಿ ಎಂದು ಹೇಳಿದರು. ರೈತರಿಂದ ಖರೀದಿಸಿದ ಧಾನ್ಯಗಳನ್ನು ಕ್ರೋಢೀಕರಿಸಿ ಶೇಖರಿಸಲು ಗೋದಾಮಗಳ ಗುಣಮಟ್ಟ ಪರಿಶೀಲಿಸಿ ಎಂದರು.


2023-24 ನೇ ಸಾಲಿನ ಮುಂಗಾರು ಋತುವಿನಲ್ಲಿ ರೈತರು ಬೆಳೆದಿರುವ ಧಾನ್ಯಗಳನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಪ್ರೂಟ್ಸ್ ದತ್ತಾಂಶದಲ್ಲಿ ರೈತರು ನೋಂದಾಯಿಸಿಕೊಂಡು, ಐಡಿ ಪಡೆಯುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಹೇಳಿದರು.


ಸಭೆಯಲ್ಲಿ ಆಹಾರ ನಾಗರಿಕ ಸರಬರಾಜು ಇಲಾಖೆ ಜಂಟಿ ಕಾರ್ಯದರ್ಶಿ ಜಿ. ಗಿರಿಜಾದೇವಿ, ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಜಿಲ್ಲಾ ವ್ಯವಸ್ಥಾಪಕ ಎಸ್.ಆರ್ ರಮೇಶ್, ದೊಡ್ಡಬಳ್ಳಾಪುರ ಎ‌.ಪಿ.ಎಂ.ಸಿ ಕಾರ್ಯದರ್ಶಿ ಅಂಜುಂ, ಆಹಾರ ನಾಗರಿಕ ಸರಬರಾಜು ಇಲಾಖೆ ಸಹಾಯಕ ನಿರ್ದೇಶಕಿ ಶೋಭ ಹೆಚ್.ಟಿ, ತಾಲ್ಲೂಕು ಆಹಾರ ಶಿರಸ್ತೇದಾರರು ಹಾಗೂ ನಿರೀಕ್ಷಕರು , ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You may have missed