ಎ.ಸೀತಾರಾಮ್ ರವರ ಸ್ವಾರತ್ಯತ್ವದಲ್ಲಿ ಮೂಡಿಬರುತ್ತಿರುವ "ಸುವರ್ಣ ಲೇಖನಿ"ಹಾಗು "ನ್ಯೂಸ್ ಕರ್ನಾಟಕ1"

ಸುದ್ಧಿ ಹಾಗು ಜಾಹಿರಾತಕ್ಕೆ ಸಂರ್ಪಕಿಸಿ +91 8553310400

ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರ ಹಾಗೂ ಕ್ಷಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ “ವೀರಮಹಿಳೆ” ಎಂದು ಗುರುತಿಸಿ ಪ್ರಶಸ್ತಿ ನೀಡಲು, ಮಹಿಳೆಯರ ಹಾಗೂ ಸಂಸ್ಥೆಗಳ ಪ್ರಶಸ್ತಿಗಾಗಿ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ಅರ್ಜಿಗಳನ್ನು ಸೂಕ್ತ ದಾಖಲಾತಿಗಳೊಂದಿಗೆ ದಿನಾಂಕ 2024 ಜನವರಿ 10ರ ಒಳಗೆ ಕಛೇರಿಗೆ ಸಲ್ಲಿಸತಕ್ಕದ್ದು.
ಆಸಕ್ತಿಯುಳ್ಳ ಸಂಸ್ಥೆ ಹಾಗೂ ವ್ಯಕ್ತಿಗಳು ಪ್ರಶಸ್ತಿಗೆ ಇರುವ ಷರತ್ತು ಹಾಗೂ ಅರ್ಜಿ ನಮೂನೆಗಳನ್ನು ಪಡೆಯಲು ಕೆಳಕಂಡ ಕಛೇರಿಯನ್ನು ಸಂಪರ್ಕಿಸಬಹುದಾಗಿದ್ದು, ಹೆಚ್ಚಿನ ವಿವರಗಳಿಗಾಗಿ ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊಠಡಿ ಸಂಖ್ಯೆ 206, 2ನೇ ಮಹಡಿ, ಜಿಲ್ಲಾಡಳಿತ ಭವನ,

ಬೀರಸಂದ್ರ ಗ್ರಾಮ. ದೇವನಹಳ್ಳಿ ತಾ||, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂ 080-29787445, ತಾಲ್ಲೂಕುಗಳಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಛೇರಿ -ದೇವನಹಳ್ಳಿ 080-27682268, ದೊಡ್ಡಬಳ್ಳಾಪುರ-080-27625228, ಹೊಸಕೋಟೆ 080-27931493, ನೆಲಮಂಗಲ-080-27722177 ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಅನಿತಾಲಕ್ಷ್ಮಿ.ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed