ಎ.ಸೀತಾರಾಮ್ ರವರ ಸ್ವಾರತ್ಯತ್ವದಲ್ಲಿ ಮೂಡಿಬರುತ್ತಿರುವ "ಸುವರ್ಣ ಲೇಖನಿ"ಹಾಗು "ನ್ಯೂಸ್ ಕರ್ನಾಟಕ1"

ಸುದ್ಧಿ ಹಾಗು ಜಾಹಿರಾತಕ್ಕೆ ಸಂರ್ಪಕಿಸಿ +91 8553310400

ಜಿಲ್ಲಾಡಳಿತ ಭವನದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ.ಪ್ರತಿಯೊಬ್ಬ ಅರ್ಹ ಮತದಾರರು ಮತಚಲಾಯಿಸಿ:ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ಪ್ರತಿಯೊಬ್ಬ ಅರ್ಹ ಮತದಾರರು ಮತಚಲಾಯಿಸಿ:ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜನವರಿ 25ಪ್ರತಿಯೊಬ್ಬ ಪ್ರಜೆಯು ನಿರ್ಭೀತರಾಗಿ ಮತದಾನವನ್ನು
ಮಾಡುವ ಜೊತೆಗೆ ಚುನಾವಣೆ ಸಂದರ್ಭದಲ್ಲಿ ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ಮತ ಚಲಾವಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಶಿವಶಂಕರ. ಎನ್ ಅವರು ಹೇಳಿದರು.


ಜಿಲ್ಲಾಡಳಿತ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿಂದು ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಜಿಲ್ಲೆಯ 18 ವರ್ಷ ಮೇಲ್ಪಟ್ಟ ಅರ್ಹ ಪ್ರಜೆಗಳು ಮತದಾರರಾಗಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿಯಾಗುವ ಜೊತೆಗೆ ಪ್ರತಿ ಚುನಾವಣೆಯಲ್ಲಿ ಭಾಗಿಯಾಗಿ ಮತದಾನ ಮಾಡಬೇಕು. 2011 ರ ಜನವರಿ 25 ರಿಂದ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿದೆ. ಈ ದಿನದ ಉದ್ದೇಶ ಮತದಾನ ಬಗ್ಗೆ ತಿಳುವಳಿಕೆ, ಜಾಗೃತಿ ನೀಡುವುದು. ಈ ಬಾರಿ ಯುವ ಮತದಾರರ ಸಂಖ್ಯೆಯನ್ನು ಹೆಚ್ಚಿಸಲು ಜಿಲ್ಲೆಯ ವಿವಿಧ ಕಾಲೇಜುಗಳಿಗೆ ಭೇಟಿ ನೀಡಿ ಮತದಾರರ ನೋಂದಣಿಗೆ ಮನವಿ ಮಾಡುವ ಕೆಲಸವಾಗಿದೆ.

ಯುವ ಮತದಾರರ ನೋಂದಾಯಿಸಲು ಗ್ರಾಮಪಂಚಾಯತಿ, ತಾಲೂಕು ಪಂಚಾಯಿತಿ ಮಟ್ಟದಲ್ಲಿ ಸಾಕಷ್ಟು ಕಾರ್ಯಕ್ರಮ ಮಾಡಲಾಗಿದೆ. ಜಿಲ್ಲೆಯಲ್ಲಿ ಸ್ವೀಪ್ ಚಟುವಟಿಕೆಗಳು ಯಶಸ್ವಿಯಾಗಿ ನಡೆದಿದೆ. ಮತದಾನವನ್ನು ನಿರ್ಭಿತಿಯಿಂದ ಯಾವುದೇ ಆಮಿಷಕ್ಕೆ ಒಳಗಾಗದೆ ಮತ ಚಲಾವಣೆ ಮಾಡಬೇಕು. ಶತಾಯುಷಿ ಗಳು ಕೂಡ ಮತದಾನ ಮಾಡುವ ಉದಾಹರಣೆ ಇದೆ. ಇದರಿಂದ ಯುವಕರು ಸಹ ಉತ್ಸುಕರಾಗಿ ಮತದಾನದ ಕಾರ್ಯದಲ್ಲಿ ತೊಡಗಿಕೊಳ್ಳಬೇಕು. ಕಾರ್ಯಕ್ರಮದ ಯಶಸ್ವಿಗಾಗಿ ಎಲ್ಲಾ ಅಧಿಕಾರಿಗಳು ಸಾಕಷ್ಟು ಶ್ರಮ ವಹಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಳಿದರು.


ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಅನುರಾಧ ಕೆ.ಎನ್ ರವರು ಮಾತನಾಡಿ ಎಲ್ಲಾ ಪ್ರಜೆಗಳಿಗೆ ಮತದಾನ ಹಕ್ಕು ಮಾತ್ರವಲ್ಲ, ಅದು ಜವಾಬ್ದಾರಿ. ಜಿಲ್ಲೆಯಲ್ಲಿನ ಎಲ್ಲಾ ಪ್ರಜೆಗಳು ಕೂಡ ಮತದಾರರಾಗಿ ನೊಂದಣಿ ಮಾಡಬೇಕು. ಮತದಾನ ಮಾಡಬೇಕು. ಈ ವರ್ಷ 14ನೇ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಪ್ರತಿಯೊಂದು ಬಾರಿ ಒಂದೊಂದು ಧ್ಯೇಯ ವಾಕ್ಯದೊಂದಿಗೆ ಕಾರ್ಯಕ್ರಮ ಆಚರಿಸಲಾಗುತ್ತದೆ. ಈ ಬಾರಿ ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುತ್ತೇನೆ ಎಂಬ ಧ್ಯೇಯ ವಾಕ್ಯ ನೀಡಲಾಗಿದೆ ಎಂದರು. ಸ್ವೀಪ್ ಚಟುವಟಿಕೆಗಳ ಮೂಲಕ ಜಾಗೃತಿ ಮೂಡಿಸಿ ಜಿಲ್ಲೆಯಲ್ಲಿ 2019 ಲೋಕಸಭಾ

ಚುನಾವಣೆಯಲ್ಲಿ ಶೇ.82 ರಷ್ಟು ಮತದಾನವಾಗಿತ್ತು. ಚುನಾವಣೆ ನಂತರ ಹೆಚ್ಚಿನ ಜಾಗೃತಿ ಮೂಲಕ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣವು ಶೇ.85 ರಷ್ಟು ಏರಿಕೆಯಾಗಿದೆ. ಈ ಬಾರಿ ಪ್ರಮಾಣ ಮತ್ತಷ್ಟು ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ ಎಂದರು. ಜಿಲ್ಲೆಯ ಸ್ವೀಪ್ ಕಾರ್ಯಕ್ರಮದಲ್ಲಿ ಗ್ರಾಮಪಂಚಾಯತಿ, ತಾಲ್ಲೂಕು ಪಂಚಾಯತಿ ಅಧಿಕಾರಿಗಳು ಕೆಲಸ ಮಾಡಿದ್ದಾರೆ. ನಗರದಲ್ಲಿ ಮತದಾನಕ್ಕೆ ಆಸಕ್ತಿ ಕಡಿಮೆ ಇದ್ದು ಬೇರೆ ಬೇರೆ ಕಾರ್ಯಕ್ರಮದ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ಸ್ವೀಪ್ ಕೆಲಸಗಳನ್ನು ಮುಂದುವರೆಸಲಾಗುತ್ತದೆ. ಎಲ್ಲರೂ ಶೇ.100 ರಷ್ಟು ನೋಂದಾಯಿಸಲು ಹಾಗೂ ಮತದಾನ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಹೊಸದಾಗಿ ನೊಂದಣಿಯಾದ ಯುವ ಮತದಾರರಿಗೆ ಗುರುತಿನ ಚೀಟಿ ವಿತರಿಸಲಾಯಿತು. ಮತದಾನದ ಜಾಗೃತಿ ಬಗ್ಗೆ ನಡೆಸಲಾದ ಕಿರುಚಿತ್ರ, ಪ್ರಬಂಧ, ರಸಪ್ರಶ್ನೆ ಸೇರಿದಂತೆ ಸಾಕಷ್ಟು ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.
ವೇದಿಕೆ ಕಾರ್ಯಕ್ರಮ ನಂತರ ಜಿಲ್ಲಾಡಳಿತ ಮುಂಭಾಗ ಮಾನವ ಸರಪಳಿ ನಿರ್ಮಿಸಿ ಮತದಾರರ ಜಾಗೃತಿ ಅಭಿಯಾನ ನಡೆಸಲಾಯಿತು.


ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಜಿಲ್ಲಾ ಪಂಚಾಯತಿ ಮುಖ್ಯ ಲೆಕ್ಕಾಧಿಕಾರಿ ಶ್ರೀನಿವಾಸ್, ಯೋಜನಾ ನಿರ್ದೇಶಕರಾದ ವಿಠಲ್ ಕಾವಳೆ, ಶಾಲ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಕೃಷ್ಣಮೂರ್ತಿ ಸೇರಿದಂತೆ ಜಿಲ್ಲಾ ಮಟ್ಟದ ಅಕಾರಿಗಳು, ವಿವಿಧ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು, ವಿದ್ಯಾರ್ಥಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

You may have missed