ಎ.ಸೀತಾರಾಮ್ ರವರ ಸ್ವಾರತ್ಯತ್ವದಲ್ಲಿ ಮೂಡಿಬರುತ್ತಿರುವ "ಸುವರ್ಣ ಲೇಖನಿ"ಹಾಗು "ನ್ಯೂಸ್ ಕರ್ನಾಟಕ1"

ಸುದ್ಧಿ ಹಾಗು ಜಾಹಿರಾತಕ್ಕೆ ಸಂರ್ಪಕಿಸಿ +91 8553310400

ಕರ್ನಾಟಕ ವಿಧಾನ ಪರಿಷತ್ತಿನ ಉಪಚುನಾವಣೆ 2024 ರ ಸಂಬಂಧ ನಾಳೆಯಿಂದ ನಿಷೇಧಾಜ್ಞೆ ಜಾರಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆಬ್ರವರಿ 13ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿನ ಉಪಚುನಾವಣೆ 2024 ರ ಸಂಬಂಧಿಸಿದಂತೆ ಫೆಬ್ರವರಿ 16 ರಂದು ಮತದಾನ ನಡೆಯಲಿದ್ದು, ಫೆಬ್ರವರಿ 14 ರ ಸಂಜೆ 4 ಗಂಟೆಯಿಂದ ಫೆಬ್ರವರಿ 16 ರ ಮಧ್ಯರಾತ್ರಿ12 ಗಂಟೆಯ ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 6 ಮತದಾನ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಾಗಲಿದೆ ಎಂದು ಡಾ.ಎನ್ ಶಿವಶಂಕರ ಅವರು ಹೇಳಿದರು.


ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಇಂದು ನಡೆದ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿನ ಉಪಚುನಾವಣೆ 2024 ರ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ಜೊತೆಗಿನ ಅಂತಿಮ ಸುತ್ತಿನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ 2024ರ ಸಂಬಂಧ ಫೆಬ್ರವರಿ 16ರಂದು ಜಿಲ್ಲೆಯಲ್ಲಿ ಮತದಾನ ನಡೆಯುವ ಆರು ಮತದಾನ ಕೇಂದ್ರಗಳ ಗಳಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ಸಮಯದಲ್ಲಿ ವಿವಿಧ ಆಸೆ ಆಮಿಷಗಳಿಗೆ ಮತದಾರರನ್ನು ಒಳಪಡಿಸುವುದು, ಬೆದರಿಸಲು ಯತ್ನಿಸುವುದು ತಮ್ಮ ಪರವಾಗಿ ಪ್ರಚಾರ ಮಾಡುವುದು, ಮತಗಟ್ಟೆಗಳ ಹತ್ತಿರದಲ್ಲಿ ಪ್ರಚಾರ ಮಾಡುವುದು ಸಾರ್ವಜನಿಕ ಸಭೆ ನಡೆಸುವುದು ಮತದಾರರನ್ನು ವಿವಿಧ ಸಾರಿಗೆ ವ್ಯವಸ್ಥೆಗಳ ಮೂಲಕ ಮತಗಟ್ಟೆಗಳಿಗೆ ಕರೆದುಕೊಂಡು ಬರುವುದು, ಶಾಂತಿಭಂಗ ಉಂಟು ಮಾಡುವುದು, ಅಹಿತಕರ ಘಟನೆಗಳು ನಡೆಯುವಂತೆ ಮಾಡುವ ಸಂಭವನೀಯತೆ ಇದನ್ನು ತಡೆಗಟ್ಟುವ ಹಾಗೂ ಮತದಾನದ ಪವಿತ್ರತೆಯನ್ನು ಕಾಪಾಡುವ ದೃಷ್ಟಿಯಿಂದ ಜಿಲ್ಲೆಯ ನಾಲ್ಕು ತಾಲೂಕುಗಳ ವ್ಯಾಪ್ತಿಯಲ್ಲಿನ 6 ಮತದಾನ ಕೇಂದ್ರಗಳಲ್ಲಿ ನಿಷೇಧಾಜ್ಞೆ ವಿಧಿಸಲಾಗಿದ್ದು ಬಹಿರಂಗ ಪ್ರಚಾರ ಕೊನೆಗೊಳ್ಳಲಿದೆ ಎಂದು ಅವರು ಹೇಳಿದರು.


ಮತದಾನ ನಡೆಯುವ ಸಂದರ್ಭದಲ್ಲಿ ಮತಗಟ್ಟೆ ಸ್ಥಳದಿಂದ 100 ಮೀಟರ್ ಅಂತರ ಕಾಯ್ದುಕೊಳ್ಳಬೇಕು. ಪೋಲಿಂಗ್ ಏಜೆಂಟ್ಸ್ ಗಳು ಮತದಾನ ದಿನದಂದು ತಪ್ಪದೆ ಬೆಳಗ್ಗೆ 7:00 ಗಂಟೆಗೆ ಹಾಜರಿರಬೇಕು. ಮತದಾರರಿಗೆ ಈಗಾಗಲೇ ಗುರುತಿನ ಚೀಟಿ ವಿತರಿಸಲು ಕ್ರಮ ವಹಿಸಲಾಗುತ್ತಿದೆ, ಮತದಾರರು ಯಾವುದೇ ಪೆನ್, ಎಲೆಕ್ಟ್ರಾನಿಕ್ ಉಪಕರಣಗಳನ್ನು ಮತದಾನದ ಸಮಯದಲ್ಲಿ ತರಬಾರದು.ಮತದಾನ ಸಮಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ವಹಿಸಿ ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಕೈಗೊಂಡು ಮತದಾನ ಸುಸೂತ್ರವಾಗಿ ನಡೆಸಲು ಸನ್ನದ್ಧರಾಗಿದ್ದೇವೆ ಎಂದು ಜಿಲ್ಲಾಧಿಕಾರಿಯವರು ರಾಜಕೀಯ ಪಕ್ಷಗಳಿಗೆ . ಮಾಹಿತಿ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You may have missed