ಎ.ಸೀತಾರಾಮ್ ರವರ ಸ್ವಾರತ್ಯತ್ವದಲ್ಲಿ ಮೂಡಿಬರುತ್ತಿರುವ "ಸುವರ್ಣ ಲೇಖನಿ"ಹಾಗು "ನ್ಯೂಸ್ ಕರ್ನಾಟಕ1"

ಸುದ್ಧಿ ಹಾಗು ಜಾಹಿರಾತಕ್ಕೆ ಸಂರ್ಪಕಿಸಿ +91 8553310400

ಸಾರ್ವತ್ರಿಕ ಲೋಕಸಭಾ ಚುನಾವಣೆ-2024

27-ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ

ಚುನಾವಣಾ ಮಾದರಿ ನೀತಿ ಸಂಹಿತೆ ಹಿನ್ನೆಲೆ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ:ಸಿ.ಇ.ಒ ಡಾ.ಕೆ.ಎನ್ ಅನುರಾಧ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು ಚುನಾವಣಾ ಕರ್ತವ್ಯಗಳಿಗೆ ನಿಯೋಜನೆ ಗೊಂಡಿರುವ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಡಾ.ಅನುರಾಧ ಕೆ.ಎನ್ ಅವರು ಹೇಳಿದರು.


ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ 2024 ರ ಲೋಕಸಭಾ ಚುನಾವಣಾ ಮಾದರಿ ನೀತಿ ಸಂಹಿತೆ ಸಂಬಂಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರ್ ಗಳಿಗೆ , ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮತ್ತು ಎಫ್.ಸಿ.ಟಿ(FST), ಎಸ್.ಎಸ್.ಟಿ(SST), ವಿ.ವಿ.ಟಿ(VVT) ತಂಡದ ಮುಖ್ಯಸ್ಥರಿಗೆ, ಅಧಿಕಾರಿಗಳಿಗೆ, ಸಿಬ್ಬಂದಿಗೆ ನಡೆದ ತರಬೇತಿ ಯನ್ನುದ್ದೇಶಿಸಿ ಅವರು ಮಾತನಾಡಿದರು.
ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸುವ ಹಿನ್ನೆಲೆಯಲ್ಲಿ ಸಭೆ, ಸಮಾರಂಭ ಗಳಿಗೆ ಕಡ್ಡಾಯ ಅನುಮತಿ ಹಾಗೂ ವೆಚ್ಚ ನಿರ್ವಹಣೆಗಳ ಬಗ್ಗೆ ನಿಗಾ ವಹಿಸಿ.
ಪೊಲೀಸ್ ಇಲಾಖೆ ಮತ್ತು ಅಬಕಾರಿ ಇಲಾಖೆ ನೇತೃತ್ವದಲ್ಲಿ ಚೆಕ್‌ಪೋಸ್ಟ್ಗಳಿಗೆ ಎಸ್‌ಎಸ್‌ಟಿ ತಂಡಗಳನ್ನು ಈಗಾಗಲೇ ನಿಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಅಧಿಕಾರಿಗಳು ಸಾಕಷ್ಟು ಜಾಗರೂಕರಾಗಿ ವಾಹನಗಳ ತಪಾಸಣೆ ಕಟ್ಟುನಿಟ್ಟಾಗಿ ನಡೆಸಲು ಸೂಚಿಸಿದರಲ್ಲದೆ ಚುನಾವಣೆಯು ಪ್ರಜಾಪ್ರಭುತ್ವ ದ ಅಂಗ ಹಬ್ಬದ ರೀತಿಯಲ್ಲಿ ನಡೆಸೋಣ ಎಂದು ಹೇಳಿದರು.


ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಂಗಪ್ಪ, ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ತರಬೇತುದಾರ ಅಭಿಜಿನ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You may have missed