ದೇವನಹಳ್ಳಿ:ಮೇ. 15 ರಂದು ಲೋಕಾಯುಕ್ತ ವತಿಯಿಂದ ವಿಜಯಪುರದಲ್ಲಿ ಜನ ಸಂಪರ್ಕ ಸಭೆ ಹಾಗೂ ಅಹವಾಲು ಸ್ವೀಕಾರ
ದೇವನಹಳ್ಳಿ:ಮೇ. 15 ರಂದು ಲೋಕಾಯುಕ್ತ ವತಿಯಿಂದ ವಿಜಯಪುರದಲ್ಲಿ ಜನ ಸಂಪರ್ಕ ಸಭೆ ಹಾಗೂ ಅಹವಾಲು ಸ್ವೀಕಾರ
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದಿಂದ ವರದಿ ಕರ್ನಾಟಕ ಲೋಕಾಯುಕ್ತದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಪವನ್ ನೆಜ್ಜೂರ್ ರವರ ನೇತೃತ್ವದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಟೌನ್ ಪ್ರವಾಸಿ ಮಂದಿರದಲ್ಲಿ ಮೇ. 15 ರಂದು ಜನ ಸಂಪರ್ಕ ಸಭೆ ಮತ್ತು ಅಹವಾಲು ಸ್ವೀಕಾರ ಸಭೆಯನ್ನು ಏರ್ಪಡಿಸಲಾಗಿರುತ್ತದೆ.
ಸರ್ಕಾರಿ ಕಛೇರಿಗಳಲ್ಲಿ ಕೆಲಸ ಮಾಡಿಕೊಡಲು ವಿಳಂಬ ನಿರ್ಲಕ್ಷ್ಯ ಅಥವಾ ಅಧಿಕಾರ ದುರುಪಯೋಗ/ದುರಾಡಳಿತ ಮಾಡುತ್ತಿದ್ದಲ್ಲಿ ಅಂತಹ ಅಧಿಕಾರಿ/ಸಿಬ್ಬಂದಿಗಳ ಮೇಲೆ ಲಿಖಿತ ಅಹವಾಲುಗಳನ್ನು ಸ್ವೀಕರಿಸಲಿದ್ದೇವೆ. ಸಾರ್ವಜನಿಕರ ದೂರುಗಳಿದ್ದಲ್ಲಿ ಮೇ. 15 ರಂದು ಲಿಖಿತ ದೂರನ್ನು ದ್ವಿಪ್ರತಿಯಲ್ಲಿ ನೀಡಬಹುದಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೋಕಾಯುಕ್ತ ಸಂಸ್ಥೆಯ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.