ಜಿಲ್ಲಾಡಳಿತ ಭವನದಲ್ಲಿ ವಿಶ್ವ ಪರಿಸರ ದಿನ ಆಚರಣೆ
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ದೇವನಹಳ್ಳಿ ಪ್ರಾದೇಶಿಕ ಅರಣ್ಯ ವಲಯದ ವತಿಯಿಂದ ವಿಶ್ವ ಪರಿಸರ ದಿನಾಚರಣೆ
ಅಂಗವಾಗಿ “ನಮ್ಮ ಭೂಮಿ-ನಮ್ಮ ಭವಿಷ್ಯ, ನಮ್ಮ ಪೀಳಿಗೆಗೆ ಪುನಃಸ್ಥಾಪನೆ” ಎಂಬ ಘೋಷವಾಕ್ಯದೊಂದಿಗೆ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಆವರಣದಲ್ಲಿಂದು ಆಚರಿಸಲಾಯಿತು.
ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಗಿಡ ನೆಡುವ ಮೂಲಕ ಕಾರ್ಯಕ್ರಮ ನೆರವೇರಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಬೆಂಗಳೂರು ಗ್ರಾಮಾಂತರ ಅರಣ್ಯ ಇಲಾಖೆಯ ಎ.ಸಿ.ಎಫ್ ಎಂ. ಶ್ರೀಧರ್, ದೇವನಹಳ್ಳಿ ವಲಯ ಅರಣ್ಯಾಧಿಕಾರಿ ಪವಿತ್ರ ವ್ಹಿ.ಜೆ ಸೇರಿ ಅರಣ್ಯ ಇಲಾಖೆಯ ಸಿಬ್ಬಂದಿ, ಇತರರು ಉಪಸ್ಥಿತರಿದ್ದರು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ದೇವನಹಳ್ಳಿ ತಾಲ್ಲೂಕಿನ 24 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಮೃತ ಸರೋವರ ಕೆರೆ ಅಂಗಳ, ಶಾಲಾ ಆವರಣ, ಸರಕಾರಿ ಗೋಮಾಳ, ಕೆರೆ ದಂಡೆ, ಘನ ತ್ಯಾಜ್ಯ ಘಟಕ, ರಸ್ತೆ ಬದಿ, ಮುಂತಾದ ಇತರೆ ಸರ್ಕಾರಿ ಸ್ಥಳಗಳಲ್ಲಿ ಗಿಡಗಳನ್ನು ನೆಡಲಾಗಿದೆ.
ಈ ಸಂದರ್ಭದಲ್ಲಿ ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳ ನೇತೃತ್ವದಲ್ಲಿ ಸಸಿಗಳನ್ನು ನೆಡಲಾಯಿತು.