ಎ.ಸೀತಾರಾಮ್ ರವರ ಸ್ವಾರತ್ಯತ್ವದಲ್ಲಿ ಮೂಡಿಬರುತ್ತಿರುವ "ಸುವರ್ಣ ಲೇಖನಿ"ಹಾಗು "ನ್ಯೂಸ್ ಕರ್ನಾಟಕ1"

ಸುದ್ಧಿ ಹಾಗು ಜಾಹಿರಾತಕ್ಕೆ ಸಂರ್ಪಕಿಸಿ +91 8553310400

ವಿಜಯಪುರ ಪಟ್ಟಣದ ವಿವಿಧ ಕಡೆ ಅನಿರೀಕ್ಷಿತ ದಾಳಿ: 04 ಕಿಶೋರ ಕಾರ್ಮಿಕರ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ,ಜಿಲ್ಲಾ ಬಾಲಕಾರ್ಮಿಕ ಯೋಜನೆ ಮತ್ತು ಮಕ್ಕಳ ಸಹಾಯವಾಣಿ-1098 ಇವರು ಜಂಟಿಯಾಗಿ ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಮಕ್ಕಳ ಸಹಾಯವಾಣಿ-1098 ಜಂಟಿಯಾಗಿ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದ ವಿವಿಧ ಸ್ಥಳಗಳಲ್ಲಿ ಸೋಮವಾರದಂದು ಬಾಲ ಕಾರ್ಮಿಕರ ಹಾಗೂ ಕಿಶೋರ ಕಾರ್ಮಿಕರ ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯನ್ನು ನಡೆಸಿದರು.

ಈ ತಪಾಸಣೆ ವೇಳೆಯಲ್ಲಿ 04 ಕಿಶೋರ ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಮುಂದಿನ ಕ್ರಮಕ್ಕಾಗಿ ಹಾಜರು ಪಡಿಸಿದರು.
ಅಲ್ಲದೇ ವಿವಿಧ ಸ್ಥಳಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ದುಡಿಮೆಗೆ ನೇಮಿಸಿಕೊಳ್ಳದಂತೆ ಅಂಗಡಿಗಳು, ಗ್ಯಾರೇಜುಗಳು, ಬೇಕರಿಗಳು, ಚಿಕನ್ ಮತ್ತು ಮಟನ್ ಅಂಗಡಿಗಳು, ಇಟ್ಟಿಗೆ ಕಾರ್ಖಾನೆ ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ, ಮಾಲೀಕರಿಗೆ ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, 14 ವರ್ಷದೊಳಗಿನ ಯಾವುದೇ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿದಲ್ಲಿ ಅಂತಹವರಿಗೆ ಕನಿಷ್ಠ 06 ತಿಂಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ಗರಿಷ್ಠ 02 ವರ್ಷದವರೆಗೂ ಜೈಲು ಶಿಕ್ಷೆ ಹಾಗೂ ರೂ. 20,000/- ಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ರೂ. 50,000/- ಸಾವಿರದವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಜಾಗೃತಿ ಮೂಡಿಸಿದರು.

ಇದೇ ವೇಳೆ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರ ಕುರಿತು ಕರಪತ್ರವನ್ನು ಮತ್ತು ಭಿತ್ತಿಪತ್ರಗಳನ್ನು ಅಂಗಡಿಗಳ ಮಾಲೀಕರಿಗೆ ವಿತರಿಸುವ ಮೂಲಕ ಇನ್ನು ಮುಂದೆ ತಮ್ಮ ಸುತ್ತಮುತ್ತಲಿನಲ್ಲಿ ಯಾವುದೇ ಮಕ್ಕಳನ್ನು ನೇಮಿಸಿಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಮತ್ತು ಪೋಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ 112 ಕರೆ ಮಾಡುವುದರ ಮೂಲಕ ಮಕ್ಕಳನ್ನು ರಕ್ಷಣೆ ಮಾಡಲು ಸಾರ್ವಜನಿಕರು ಹಾಗೂ ಅಂಗಡಿಗಳ ಮಾಲೀಕರು ಸಹಕಾರ ನೀಡುವಂತೆ ಅಧಿಕಾರಿಗಳು ಸೂಚಿಸಿದರು.

ಅಲ್ಲದೇ ವಿಜಯಪುರ ಪಟ್ಟಣದ ವಿವಿಧ ಸ್ಥಳಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರಕಾರ್ಮಿಕರನ್ನು ದುಡಿಮೆಗೆ ನೇಮಿಸಿಕೊಂಳ್ಳದಂತೆ ಅಂಗಡಿಗಳು, ಗ್ಯಾರೇಜುಗಳು, ಬೇಕರಿಗಳು, ಚಿಕನ್ ಮತ್ತು ಮಟನ್ ಅಂಗಡಿಗಳು ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ ಮಾಲೀಕರಿಗೆ ಕರಪತ್ರಗಳನ್ನು ಹಂಚಿ ಮಾಲೀಕರಿಗೆ ಹಾಗೂ ಸ್ಥಳಗಳಲ್ಲಿ ಇದ್ದ ಸಾರ್ವಜನಿಕರಿಗೆ ಜಾಗೃತಿಯನ್ನು ಮೂಡಿಸಲಾಯಿತು.

ಈ ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಸುಬ್ಬಾರಾವ್ ಎಸ್, ದೇವನಹಳ್ಳಿ ತಾಲ್ಲೂಕು ಕಾರ್ಮಿಕ ನಿರೀಕ್ಷಕಿ ಅಂಬಿಕಾ ವೈ, ಶಿಕ್ಷಣ ಇಲಾಖೆಯ ಬಿ ಆರ್ ಸಿ ನಾಗಪ್ಪ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ನರಸಿಂಹ ರಾಜು, ಮಕ್ಕಳ ಸಹಾಯವಾಣಿಯ ಮಲ್ಲಿಕಾರ್ಜುನ ಮತ್ತು ಲಾವಣ್ಯ ಹಾಜರಿದ್ದರು.

Leave a Reply

Your email address will not be published. Required fields are marked *

You may have missed