ಗ್ರಾಮ ಪಂಚಾಯತಿ ಸದಸ್ಯತ್ವ ವಜಾಗೊಳಿಸಲು ಮನವಿ,ದಾಸರ ಬೀದಿ ಮುರಳಿ
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲ ಗ್ರಾಮ ಪಂಚಾಯತಿ ಮತ್ತು ಅಧಿಕಾರಿಗಳ ವಿರುದ್ದ ಸುಳ್ಳು ಸುದ್ದಿಗಳನ್ನು ಹರಡಿಸಿ ತೇಜೋವಧೆ ಮಾಡುತ್ತಿರುವ ಅದೇ ಗ್ರಾಮ ಪಂಚಾಯತಿ ಸದಸ್ಯ ಸೋಮಶೇಖರ್.ಕೆ ಕೂಡಲೇ ಸದಸ್ಯತ್ವ ಸ್ಥಾನದಿಂದ ವಜಾಗೊಳಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಹ ಕಾರ್ಯದರ್ಶಿ ದಾಸರಬೀದಿ ಮುರಳಿ ಆಗ್ರಹಿಸಿದ್ದಾರೆ.
ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಅಂಗನವಾಡಿ ಜಾಗವನ್ನ ಖಾಸಗಿ ವ್ಯಕ್ತಿಗಳಿಗೆ ಇ-ಸ್ವತ್ತು ಮಾಡಿ ಮಾರಾಟ ಮಾಡಲಾಗಿದೆ ಎಂದು ಸಾಕ್ಷಿ ರಹಿತ ಆರೋಪವನ್ನು ಮಾಡಿರುವ ಹಿನ್ನೆಲೆಯಲ್ಲಿ
ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕು, ಕನ್ನಮಂಗಲ ಗ್ರಾಮ ಪಂಚಾಯತಿ ವ್ಯಾಪ್ತಿ, ದೊಡ್ಡಪ್ಪನಹಳ್ಳಿ ಗ್ರಾಮದ ಸದರಸ್ಯರಾದ ಸೋಮಶೇಖರ್.ಕೆ ಸದಸ್ಯತ್ವದ ಅಧಿಕಾರ ಅವಧಿಯಲ್ಲಿ ದುರ್ನಡತೆಯಿಂದ ಅಧಿಕಾರ ದುರುಪಯೋಗಪಡಿಸಿಕೊಂಡು ತಲೆತಗ್ಗಿಸುವಂತಹ ತಪ್ಪು ಮಾಡಿರುವುದರಿಂದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ-1993 ಪ್ರಕರಣ 43-ಎ (i) ರಡಿ ಸದಸ್ಯತ್ವದಿಂದ ಅನರ್ಹಗೊಳಿಸಿ,
ಸದಸ್ಯತ್ವದಿಂದ ತೆಗೆದುಹಾಕಲು, ಮುಂದಿನ ಆರು ವರ್ಷಗಳವರೆಗೆ ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹಗೊಳಿಸಲು ಕಾನೂನು ಕ್ರಮ ಜರುಗಿಸಬೇಕೆಂದು
ಆರ್ ಡಿ ಪಿಆರ್ ಇಲಾಖೆಯ ಮುಖ್ಯ ಅಧಿಕಾರಿಗಳಿಗೆ ದಲಿತ ಸಂಘರ್ಷ ಸಮಿತಿ ರಾಜ್ಯ ಸಹ ಕಾರ್ಯದರ್ಶಿ ದಾಸರಬೀದಿ ಮುರಳಿ ಪತ್ರ ಮೂಲಕ ಮನವಿ ಮಾಡಿದ್ದಾರೆ .