ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಯ ಕಾರ್ಯಕ್ರಮವನ್ನು ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ ಹೆಚ್. ಮುನಿಯಪ್ಪನವರು ಉದ್ಘಾಟಿಸಿದರು.
ದೊಡ್ಡಬಳ್ಳಪುರದ ತಾಯಿ ಮಕ್ಕಳ ಆಸ್ಪತ್ರೆ ಚಿಕಿತ್ಸೆನ್ನು ನೀಡುವಲ್ಲಿ ದೇಶದಲ್ಲಿಯೇ ಮೊದಲನೇ ಸ್ಥಾನವನ್ನು ಗಳಿಸಿರುವುದು ಸಂತಸಕರ ವಿಷಯ ವೈದ್ಯರಿಗೆ ಅಭಿನಂದನೆಗಳು ಸಲ್ಲಿಸಿದ ಜಿಲ್ಲಾ ಉಸ್ತುವಾರಿ: ಸಚಿವ ಮುನಿಯಪ್ಪ.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಯ ಕಾರ್ಯಕ್ರಮವನ್ನು ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ *ಕೆಹೆಚ್. ಮುನಿಯಪ್ಪ* ನವರು ಉದ್ಘಾಟಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ಜಿಲ್ಲಾ ಆಸ್ಪತ್ರೆ ವೈದ್ಯಕೀಯ ಚಿಕಿತ್ಸೆ ನೀಡುವಲ್ಲಿ ಉತ್ತಮವಾಗಿದ್ದು ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಿರುವದು ಸಂತಸಕರ ವಿಷಯವಾಗಿದ್ದು ಬಡವರಿಗೆ ಉತ್ತಮವಾದ ಚಿಕಿತ್ಸೆಯನ್ನು ಕಲ್ಲಿಸುವಲ್ಲಿ ಪ್ರಮುಖವಾದ ಪಾತ್ರ ವಹಿಸಬೇಕು ಎಂದರು.
ಜಿಲ್ಲೆಯ ಒಟ್ಟು 5.ಕೋಟಿ 56 ಲಕ್ಷ ರೂಗಳ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಯನ್ನು ನೆರವೇರಿಸಿದರು.
ಪ್ರಧಾನ ಮಂತ್ರಿಗಳ ತೀವ್ರನಿಗಾ ಘಟಕವನ್ನು ಶೀಘ್ರದಲ್ಲಿ ನಿರ್ಮಾಣ ಮಾಡುವುದಾಗಿ ಹೇಳಿದರು.
ಸರ್ಕಾರಿ ಆಸ್ಪತ್ರೆಗಳು ಬಡವರಿಗೆ ಅನುಕೂಲಕರವಾಗಿರುವ ರೀತಿಯಲ್ಲಿ ನಡೆಯಬೇಕು ಎಂದರು
ಈ ಸಂದರ್ಭದಲ್ಲಿ ಶಾಸಕ ಧೀರಜ್ ಮುನಿರಾಜು,
ಬೆಂಗಳೂರು ಗ್ರಾಮಾಂತರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅಧ್ಯಕ್ಷರಾದ ಚನ್ನಹಳ್ಳಿ ಬಿ .
ರಾಜಣ್ಣ ರವರು ಉಪ ಕಾರ್ಯದರ್ಶಿ ರಮೇಶ್,
ಉಪ ನೊಂದಣಾಧಿಕಾರಿ ದುರ್ಗಶ್ರೀ,ದೇವನಹಳ್ಳಿ ತಾಲ್ಲೂಕು ತಹಶಿಲ್ದಾರ್ H.ಬಾಲಕೃಷ್ಣ, ಜಿಲ್ಲಾ ಆರೋಗ್ಯಾಧಿಕಾರಿ ಸುನೀಲ್ ಕುಮಾರ್, ಕಾರ್ಯ ನಿರ್ವಾಹಣಾಧಿಕಾರಿಗಳಾದಮುನಿರಾಜು,ನಗರಸಭಾ ಸದಸ್ಯರು, ಗ್ರಾಮ ಪಂಚಾಯತಿ ಸದಸ್ಯರು, ಮುಖಂಡರು ಉಪಸ್ಥಿತರಿದ್ದರು.