ಎ.ಸೀತಾರಾಮ್ ರವರ ಸ್ವಾರತ್ಯತ್ವದಲ್ಲಿ ಮೂಡಿಬರುತ್ತಿರುವ "ಸುವರ್ಣ ಲೇಖನಿ"ಹಾಗು "ನ್ಯೂಸ್ ಕರ್ನಾಟಕ1"

ಸುದ್ಧಿ ಹಾಗು ಜಾಹಿರಾತಕ್ಕೆ ಸಂರ್ಪಕಿಸಿ +91 8553310400

ವಿಶ್ವ ಶೌಚಾಲಯ ದಿನ ನ. 19 ರಿಂದ ಡಿ. 10 ರವರೆಗೆ ನಮ್ಮ ಶೌಚಾಲಯ, ನಮ್ಮ ಗೌರವ ಆಂದೋಲನ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮದಲ್ಲಿ ವಿಶ್ವ ಶೌಚಾಲಯ ದಿನವನ್ನು ಆಚರಿಸಲಾಯಿತು.

ವಿಶ್ವ ಶೌಚಾಲಯ ದಿನದ ಅಂಗವಾಗಿ ನವೆಂಬರ್ 19 ರಿಂದ ಡಿಸೆಂಬರ್ 10 ರವರೆಗೆ ನಡೆಯುವ ‘ನಮ್ಮ ಶೌಚಾಲಯ, ನಮ್ಮ ಗೌರವ ಆಂದೋಲನ’ಕ್ಕೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಶಾಂತಕುಮಾರ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು

.

ನಂತರ ಮಾತನಾಡಿ ಪ್ರತಿಯೊಬ್ಬರು ತಮ್ಮ ಮನೆ, ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಚವಾಗಿ, ನೈರ್ಮಲ್ಯದಿಂದ ಕಾಪಾಡಬೇಕು. ನೈರ್ಮಲ್ಯ ಕಾಪಾಡುವುದರಿಂದ ನಮ್ಮ ಆರೋಗ್ಯ ವೃದ್ಧಿಸಿಕೊಳ್ಳಬಹುದು. ಹಾಗಾಗಿ ಪ್ರತಿಯೊಬ್ಬರೂ ಬಯಲು ಶೌಚ ಮಾಡುವುದನ್ನು ಬಿಟ್ಟು ಮನೆ ಶೌಚಾಲಯಗಳನ್ನು ಬಳಸುವ ಜತೆಗೆ ಸುತ್ತ ಮುತ್ತಲಿನ ಪ್ರತಿಯೊಬ್ಬ ಜನರು ಶೌಚಾಲಯ ಬಳಸುವಂತೆ ಪ್ರೇರಣೆ ತುಂಬಬೇಕು. ಪ್ರತಿಯೊಬ್ಬರೂ ಸಾರ್ವಜನಿಕ ಶೌಚಾಲಯಗಳನ್ನು ನಮ್ಮ ಮನೆ ಶೌಚಾಲಯಗಳಂತೆ ಬಳಸಿಕೊಂಡ ಬಯಲು ಶೌಚ್ಛ ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಹೇಳಿದರು.

ಈ ವೇಳೆ ಶೌಚಾಲಯ ಬಳಕೆ ಹಾಗೂ ಸ್ವಚ್ಛತೆಯ ಕುರಿತು ಗ್ರಾಮಸ್ಥರಿಗೆ ಅರಿವು ಮೂಡಿಸುವ ದೃಷ್ಟಿಯಿಂದ ಗ್ರಾಮದಲ್ಲಿ ಜಾಗೃತಿ ಜಾಥಾ ನಡೆಸಲಾಯಿತು.

ಈ ಸಂದರ್ಭದಲ್ಲಿ ದೇವನಹಳ್ಳಿ ತಾ.ಪಂ ಇಒ ಶ್ರೀನಾಥಗೌಡ ಅವರು
ಶೌಚಾಲಯ ಬಳಕೆ ಹಾಗೂ ನೈರ್ಮಲ್ಯ ಕಾಪಾಡುವ ಕುರಿತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಕಾರ್ಯಕ್ರಮದಲ್ಲಿ ಕುಂದಾಣ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೇತ್ರಾವತಿ ನಾಗೇಶ್, ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಜಿ.ಪಂ ಯೋಜನಾ ನಿರ್ದೇಶಕ ವಿಠಲ್ ಕಾವ್ಳೆ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುನೀಲಕುಮಾರ, ಕುಂದಾಣ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಕುಮಾರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗಿಯಾಗಿದ್ದರು.

About The Author

Leave a Reply

Your email address will not be published. Required fields are marked *

You may have missed