ಎ.ಸೀತಾರಾಮ್ ರವರ ಸ್ವಾರತ್ಯತ್ವದಲ್ಲಿ ಮೂಡಿಬರುತ್ತಿರುವ "ಸುವರ್ಣ ಲೇಖನಿ"ಹಾಗು "ನ್ಯೂಸ್ ಕರ್ನಾಟಕ1"

ಸುದ್ಧಿ ಹಾಗು ಜಾಹಿರಾತಕ್ಕೆ ಸಂರ್ಪಕಿಸಿ +91 8553310400

ಏಪ್ರಿಲ್ ಮಾಹೆಯಲ್ಲಿ 2500 ನಿವೇಶನ ಹಂಚಿಕೆ ಗುರಿ:ಸಚಿವ ಮುನಿಯಪ್ಪ

ದೇವನಹಳ್ಳಿ ತಾಲ್ಲೂಕಿನ ನಿವೇಶನ ರಹಿತ ಅರ್ಹ ಫಲಾನುಭವಿಗಳನ್ನು ಈಗಾಗಲೇ ಗುರ್ತಿಸಿಲಾಗಿದ್ದು
ಏಪ್ರಿಲ್ ಮಾಹೆಯಲ್ಲಿ 2500 ನಿವೇಶನ ಹಂಚಿಕೆ ಮಾಡುವ ಗುರಿ ಇದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.ಕನ್ನಮಂಗಲ ಗ್ರಾಮ ಪಂಚಾಯತಿ ಆವರಣದಲ್ಲಿ ನಡೆದ 2024-25ನೇ ಸಾಲಿನ ಗ್ರಾಮಸಭೆಯಲ್ಲಿ ಮಾತನಾಡಿದ ಸಚಿವರು ಮಾರ್ಚ್ ಅಂತ್ಯದಲ್ಲಿ ನಿವೇಶನ ನೀಡುವ ಗುರಿ ಹೊಂದಲಾಗಿತ್ತು ಕಾರಣಾಂತರಗಳಿಂದ ಮುಂದೂಡಲಾಗಿದ್ದು ಏಪ್ರಿಲ್ ಮಾಹೆಯಲ್ಲಿ ದೊಡ್ಡಮಟ್ಟದಲ್ಲಿ ಕಾರ್ಯಕ್ರಮ ಏರ್ಪಡಿಸಿ ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಲಾಗುವುದು ಎಂದರು.ಪ್ರತಿ ಗ್ರಾಮಪಂಚಾಯತಿಯಲ್ಲಿ ಹೊಸ ಮಾದರಿ ಶಾಲೆಗಳ ನಿರ್ಮಾಣದ ಗುರಿಯನ್ನು ಹೊಂದಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಲಭ್ಯವಾದಲ್ಲಿ ಭವಿಷ್ಯದಲ್ಲಿ ಮಕ್ಕಳು ಉನ್ನತ ಹುದ್ದೆಗಳನ್ನು ಪಡೆಯಲು ಸಹಕಾರಿಯಾಗುತ್ತೆ ಎಂದು ಹೇಳಿದರು.ಮಕ್ಕಳ ಪೋಷಣೆ, ಪಾಲನೆಯಲ್ಲಿ ತಾಯಂದಿರ ಪಾತ್ರ ಬಹಳ ಮುಖ್ಯ. ಗರ್ಭಿಣಿ, ಬಾಣಂತಿಯರಿಗೆ ಪೌಷ್ಟಿಕ ಅಹಾರವನ್ನು ಅಂಗನವಾಡಿ ಮುಖಾಂತರ ಕ್ರಮಬದ್ದವಾಗಿ ವಿತರಿಸಬೇಕು. ಇಲ್ಲವಾದಲ್ಲಿ ಅಪೌಷ್ಟಿಕ ಮಕ್ಕಳ ಜನನವಾಗಿ ಸಮಾಜಕ್ಕೆ, ಕುಟಂಬಕ್ಕೂ ಹೊರೆಯಾಗಲಿದ್ದಾರೆ. ಹಾಗಾಗಿ ಪೌಷ್ಟಿಕ ಆಹಾರ ವಿತರಣೆಯಲ್ಲಿ ಯಾವುದೇ ಲೋಪಗಳು ಉಂಟಾಗದೇ ಅಹಾರ ವಿತರಿಸುವ ಮೂಲಕ ಅರಿವು ಮೂಡಿಸಿ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.ಗ್ರಾಮ ಸಭೆಯಲ್ಲಿ ವಿಶೇಷಚೇತನರಿಗೆ ಸೋಲಾರ್ ಕಿಟ್ ವಿತರಣೆ , ತಾಂತ್ರಿಕ ಮತ್ತು ವೈದ್ಯಕೀಯ ಪದವಿಯ ವಿದ್ಯಾರ್ಥಿಗಳಿಗೆ ಸಾಧನ ಸಲಕರಣೆಗಳ ವಿತರಣೆ, ತರಬೇತಿ ಪಡೆದ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ, ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಯಿತು. ಕನ್ನಮಂಗಲ ಪಂಚಾಯತಿ ಅಭಿವೃದ್ಧಿ ಕಾರ್ಯಗಳಲ್ಲಿ ಇತರ ಪಂಚಾಯತಿಗಳಿಗೆ ಮಾದರಿ ಪಂಚಾಯತಿ ಯಾಗಲಿ ಎಂದು ಸಚಿವರು ಆಶಿಸಿದರು.ಈ ಸಂದರ್ಭದಲ್ಲಿ ಬಯಪ್ಪಾ ಅಧ್ಯಕ್ಷರಾದ ಶಾಂತಕುಮಾರ್, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಜಗನ್ನಾಥ, ಕನ್ನಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಾಲಿನಿ, ಉಪಾಧ್ಯಕ್ಷರಾದ ವನಜಾಕ್ಷಿಮ್ಮ, ಗ್ರಾಮ ಪಂಚಾಯಿತಿ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು, ಪಿ.ಡಿ.ಒ ಶ್ರೀನಿವಾಸ್, ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *