ಎ.ಸೀತಾರಾಮ್ ರವರ ಸ್ವಾರತ್ಯತ್ವದಲ್ಲಿ ಮೂಡಿಬರುತ್ತಿರುವ "ಸುವರ್ಣ ಲೇಖನಿ"ಹಾಗು "ನ್ಯೂಸ್ ಕರ್ನಾಟಕ1"

ಸುದ್ಧಿ ಹಾಗು ಜಾಹಿರಾತಕ್ಕೆ ಸಂರ್ಪಕಿಸಿ +91 8553310400

ಅಲ್ಲಮಪ್ರಭು ಜಯಂತಿ ಮತ್ತು ಯುಗಾದಿ ಕವಿ ಗೋಷ್ಠಿ

ವಿಜಯಪುರ- ಹಿಂದೂ ಸಂಸ್ಕೃತಿಯು ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗಿದೆಂದು ತಮ್ಮ ಖೇದ ವ್ಯಕ್ತಪಡಿಸುತ್ತಾ ಆದ್ದರಿಂದ ತಾಯಂದಿರು ಮಕ್ಕಳಿಗೆ ಉತ್ತಮ ಸಂಸ್ಕೃತಿಯನ್ನು ಬೆಳೆಸಿಕೊಳ್ಳಲು ತಿಳುವಳಿಕೆಯನ್ನು ನೀಡಬೇಕೆಂದು ಅಖಿಲ ಕರ್ನಾಟಕ ಮಿತ್ರ ಸಂಘ ಅಧ್ಯಕ್ಷರಾದ ಚಿ.ಮಾ.ಸುಧಾಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿಜಯಪುರ ಪಟ್ಟಣದಲ್ಲಿರುವ ಮಹಂತಿನ ಮಠ ಧರ್ಮ ಸಂಸ್ಥೆಯ ಸಭಾಂಗಣದಲ್ಲಿ ಅಖಿಲ ಕರ್ನಾಟಕ ಮಿತ್ರ ಸಂಘ ಕಸಾಪ ವಿಜಯಪುರ ನಗರ ಘಟಕ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಮತ್ತು ತಾಲೂಕು ಘಟಕದ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿತ್ತು ಜಿಲ್ಲಾ ಮತ್ತು ತಾಲ್ಲೂಕು ಘಟಕದ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಕದಳಿ ವೇದಿಕೆ ಜಿಲ್ಲಾ ಅಧ್ಯಕ್ಷರಾದ ಶ್ರೀಮತಿ ಸ್ಟರ್ಣಗೌರಿ ಮಹಾದೇವ್ ಅಲ್ಲಮ್ಮ ಪ್ರಭು ಜಯಂತಿ ಬಗ್ಗೆ ಉಪನ್ಯಾಸ ನೀಡುತ್ತಾ೧೨ನೆಯ ಶತಮಾನದ ಶಿವಶರಣರಲ್ಲಿ ಅಲ್ಲಮಪ್ರಭು ಉಚ್ಚಸ್ಥಾನದಲ್ಲಿದ್ದಾನೆ. ಈತನು ಅರಸು ಮನೆತನದಲ್ಲಿಯೆ ಹುಟ್ಟಿ ಬೆಳೆದವನಾದರೂ, ಮನೆ ಬಿಟ್ಟು ತೆರಳಿ ಅಧ್ಯಾತ್ಮಸಾಧಕನಾದನೆಂದು ಹೇಳಲಾಗುತ್ತಿದೆ.

ಬಸವಣ್ಣನ ಕಲ್ಯಾಣಕ್ಕೆ ಬಂದ ಅಲ್ಲಮಪ್ರಭು ಅಲ್ಲಿ ಅನುಭವಮಂಟಪದ ಶೂನ್ಯಸಿಂಹಾಸನದ ಅಧ್ಯಕ್ಷನಾಗುತ್ತಾನೆ. ಅಲ್ಲಮನ ವಚನಚಂದ್ರಿಕೆಯಲ್ಲಿ ೧೨೯೪ ವಚನಗಳು ಲಭ್ಯವಾಗಿವೆ. ಅಲ್ಲಮಪ್ರಭು ತನ್ನ ಕೊನೆಯ ದಿನಗಳಲ್ಲಿ ಶ್ರೀಶೈಲ‍ಕ್ಕೆ ಹೋಗಿ ಅಲ್ಲಿಯ ವನದಲ್ಲಿ ಶಿವೈಕ್ಯನಾದನೆಂದು ಪ್ರತೀತಿ.

ಬಸವಣ್ಣನವರ ಸಮಕಾಲೀನನಾದ ಅಲ್ಲಮಪ್ರಭುವಿನ ವಚನಗಳ ಅಂಕಿತ ‘ಗುಹೇಶ್ವರ’ ಅಥವಾ ‘ಗೊಹೇಶ್ವರ’. ಈತನ ವಚನಗಳಲ್ಲಿ ಗಹನವಾದ ಆಧ್ಯಾತ್ಮ ಹಾಗೂ ತಾತ್ವಿಕ ವಿಚಾರಗಳಿವೆ. ಅಲ್ಲಮನ ಆಧ್ಯಾತ್ಮಿಕ ಅನುಭವಗಳ ಅಸಾಮಾನ್ಯತೆಯಿಂದ ಅವನ ವಚನಗಳನ್ನು ಅರ್ಥಮಾಡಿಕೊಳ್ಳುವುದು ಕಷ್ಟ.

ಅವನದು ಬಹುಮಟ್ಟಿಗೆ ರೂಪಕ ಭಾಷೆ. ಈ ಭಾಷೆ ಅವನ ವೈಶಿಷ್ಟ್ಯವೂ ಹೌದು. ಚಾಮರಸನು ತನ್ನ ಪ್ರಭುಲಿಂಗಲೀಲೆ ಎನ್ನುವ ಕಾವ್ಯದಲ್ಲಿ ಅಲ್ಲಮಪ್ರಭುವಿನ ಐತಿಹ್ಯವನ್ನು ವರ್ಣಿಸಿದ್ದಾನೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷರಾದ ಚಂದ್ರಶೇಖರ್ ಹಡಪದ್ ವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅಖಿಲ ಭಾರತ ಶರಣ ಪರಿಷತ್ ದೇವನಹಳ್ಳಿ ತಾಲ್ಲೂಕು ಅಧ್ಯಕ್ಷರಾದ ಮ.ಸುರೇಶ್ ಬಾಬು ರಾಷ್ಟ್ರೀಯ ಬಸವದಳ ಕಾರ್ಯದರ್ಶಿಗಳಾದ ಬೇಕರಿ ಶಿವಣ್ಣ ಎಂ.ಆರ್ ಬಸವರಾಜ್ ಕಸಾಪ ನಗರ ಘಟಕ ಅಧ್ಯಕ್ಷರಾದ ಜೆ.ಎನ್.ಶ್ರೀನಿವಾಸ್ ಮಹಂತಿನ ಮಠ ಧರ್ಮಸಂಸ್ಥೆ ಕಾರ್ಯದರ್ಶಿಗಳಾದ ವಿ.ವಿಶ್ವನಾಥ್ ಗೌರವ ಕಾರ್ಯದರ್ಶಿಗಳಾದ ಆರ್.ಮುನಿರಾಜ್ ಕಸಾಪ ಘಟಕ ಮಾಜಿ ಅಧ್ಯಕ್ಷರಾದ ಜೆ.ಆರ್ ಮುನಿ ವೀರಣ್ಣ ಅರಿವಿನ ಮನೆಯ ಅಕ್ಕಂದಿರು ಕದಳಿ ವೇದಿಕೆ ಪದಾಧಿಕಾರಿಗಳು ಉಪಸ್ಥಿತರಿದ್ದರು..

Leave a Reply

Your email address will not be published. Required fields are marked *