ಎ.ಸೀತಾರಾಮ್ ರವರ ಸ್ವಾರತ್ಯತ್ವದಲ್ಲಿ ಮೂಡಿಬರುತ್ತಿರುವ "ಸುವರ್ಣ ಲೇಖನಿ"ಹಾಗು "ನ್ಯೂಸ್ ಕರ್ನಾಟಕ1"

ಸುದ್ಧಿ ಹಾಗು ಜಾಹಿರಾತಕ್ಕೆ ಸಂರ್ಪಕಿಸಿ +91 8553310400

ಮೇ 05 ರಿಂದ ಪ.ಜಾತಿ ಒಳಮೀಸಲಾತಿ ಸಮೀಕ್ಷೆಅಧಿಕಾರಿಗಳಿಗೆ ಪ.ಜಾತಿ ಒಳಮೀಸಲಾತಿ ಸಮೀಕ್ಷೆ ತರಬೇತಿ ಕಾರ್ಯಗಾರ

ಸಾಮಾಜಿಕ ನ್ಯಾಯವನ್ನು ಎಲ್ಲಾ ವರ್ಗದವರಿಗೂ ಒದಗಿಸಬೇಕು ಎಂಬುದು ಸರ್ಕಾರದ ಉದ್ದೇಶವಾಗಿದ್ದು ಪರಿಶಿಷ್ಟ ಜಾತಿ ಒಳಮೀಸಲಾತಿ ಸಮೀಕ್ಷೆಯನ್ನು ಮೇ 05 ರಿಂದ ಕೈಗೊಂಡಿದ್ದು ಗಣತಿದಾರರು ಮನೆ ಮನೆ ಭೇಟಿ ನೀಡಿ ದತ್ತಾಂಶ ಸಂಗ್ರಹಿಸಲಿದ್ದಾರೆ, ದತ್ತಾಂಶ ಸಂಗ್ರಹದಲ್ಲಿ ಲೋಪವಾಗದಂತೆ ಸರಿಯಾದ ಕ್ರಮದಲ್ಲಿ ಸಮೀಕ್ಷೆ ಮಾಡಿ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಶಾ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗೌರವಾನ್ವಿತ ನ್ಯಾಯಮೂರ್ತಿಗಳಾದ ಶ್ರೀ ಹೆಚ್.ಎನ್ ನಾಗಮೋಹನ್ ದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಸಮೀಕ್ಷೆ ಕುರಿತ ತಾಲ್ಲೂಕು ಮಟ್ಟದ ಮಾಸ್ಟರ್ ಟ್ರೈನರ್ ಗಳ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಒಳಮೀಸಲಾತಿ ಸಮೀಕ್ಷೆಯು ಮೇ 05 ರಿಂದ ಪ್ರಾರಂಭವಾಗಲಿದೆ. ಸಮೀಕ್ಷೆ ನಡೆಸಲು ಸರ್ಕಾರದಿಂದ ಅಪ್ಲಿಕೇಶನ್ ಸಿದ್ದಪಡಿಸಲಾಗಿದ್ದು, ಸಮೀಕ್ಷೆಯಲ್ಲಿ ಬರುವ ತಾಂತ್ರಿಕ ತೊಂದರೆ ಹಾಗೂ ಅದಕ್ಕೆ ಪೂರಕ ಪರಿಹಾರವನ್ನು ಪಡೆದುಕೊಳ್ಳಲು ತಿಳಿಸಿದರು. ಈ ತರಬೇತಿಯಲ್ಲಿ ಅಪ್ಲೀಕೇಶನ್ ನಿರ್ವಹಣೆ, ಹೇಗೆ ದತ್ತಾಂಶ ಸಂಗ್ರಹಿಸಿ ನಮೂದಿಸಬೇಕು ಎಂಬ ಸಂಪೂರ್ಣ ಮಾಹಿತಿ ಇದೆ. ದತ್ತಾಂಶದಲ್ಲಿ ಏರುಪೇರಾದರೇ ಸರ್ಕಾರದಿಂದ ಸಿಗುವ ರಾಜಕೀಯ, ಶಿಕ್ಷಣ, ಉದ್ಯೋಗ, ಸೇರಿದಂತೆ ಎಲ್ಲಾ ಸೌಲಭ್ಯಗಳಿಂದ ವಂಚಿತರಾಗುತ್ತಾರೆ. ಹಾಗಾಗಿ ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ಮಾಡಿ ದತ್ತಾಂಶ ಸರಿಯಾದ ಕ್ರಮದಲ್ಲಿ ಸಂಗ್ರಹಿಸಿ ಎಂದರು. ಸುಭದ್ರ ಪ್ರಜಾಪ್ರಭುತ್ವಕ್ಕೆ ನೀವೆಲ್ಲರು ನೀಡುವ ದತ್ತಾಂಶ ಮುಖ್ಯವಾಗಿದೆ ಎಂದರು.

*ಸಮೀಕ್ಷೆಯ ವಿಧಾನ ಮತ್ತು ವೇಳಾಪಟ್ಟಿ ವಿವರ*

ಪರಿಶಿಷ್ಟ ಜಾತಿ ಒಳಮೀಸಲಾತಿ ಸಮೀಕ್ಷೆಗೆ ಶಿಕ್ಷಕರನ್ನು ಗಣತಿದಾರರನ್ನಾಗಿ ನೇಮಿಸಲಾಗುವುದು. ಮೊದಲ ಹಂತದಲ್ಲಿ ಮೇ 5 ರಿಂದ 17 ವರೆಗೆ ಗಣತಿದಾರರು ಮನೆ ಮನೆ ಭೇಟಿ ನೀಡಿ ಸಮೀಕ್ಷೆ ಕೈಗೊಳ್ಳುವರು. ಎರಡನೇ ಹಂತದಲ್ಲಿ ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಕೈಗೊಳ್ಳುವರು. ಮೂರನೇ ಹಂತದಲ್ಲಿ ಮೇ 19 ರಿಂದ 23 ರ ವರೆಗೆ ಆನ್ಲೈನ್ ಮೂಲಕ ಸ್ವಯಂ ಘೋಷಣೆ ಮಾಡಬಹುದಾಗಿದೆ.

ಕಾರ್ಯಗಾರದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಪ್ರೇಮ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಬೈಲಾಂಜಿನಪ್ಪ, ದತ್ತಾಂಶ ಸಂಗ್ರಹ ಜಿಲ್ಲಾ, ತಾಲ್ಲೂಕು ಮಟ್ಟದ ಮಾಸ್ಟರ್ ಟ್ರೇನರ್ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

About The Author

1 thought on “ಮೇ 05 ರಿಂದ ಪ.ಜಾತಿ ಒಳಮೀಸಲಾತಿ ಸಮೀಕ್ಷೆಅಧಿಕಾರಿಗಳಿಗೆ ಪ.ಜಾತಿ ಒಳಮೀಸಲಾತಿ ಸಮೀಕ್ಷೆ ತರಬೇತಿ ಕಾರ್ಯಗಾರ

Leave a Reply

Your email address will not be published. Required fields are marked *

You may have missed