ನಾಡಪ್ರಭು ಕೆಂಪೇಗೌಡರ 516 ನೇ ಜಯಂತ್ಯೋತ್ಸವಕೆಂಪೇಗೌಡರ ಪುರಜ್ಯೋತಿ ರಥಯಾತ್ರೆಗೆ ಚಾಲನೆ ನೀಡಿದ ಸಚಿವ ಕೆ.ಹೆಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯೋತ್ಸವ ಕ್ರಾರ್ಯಕ್ರಮ ಸುದ್ದಿ” ಸುವರ್ಣ ಲೇಖನಿ”ಯಲ್ಲಿ ಬಿಗ್ ನ್ಯೂಸ್.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ದೇವನಹಳ್ಳಿಯ ಆವತಿ ಗ್ರಾಮದಲ್ಲಿ ಆಯೋಜಿಸಿದ್ದ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಜ್ಯೋತಿ ರಥಯಾತ್ರೆಗೆ ಆಹಾರ ನಾಗರಿಕ ಸರಬರಾಜು,ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಆವತಿ ಚನ್ನಕೇಶವ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಜ್ಯೋತಿ ರಥಯಾತ್ರೆಗೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಬಿ ಬಸವರಾಜು, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ(ಬಯಪ) ಅಧ್ಯಕ್ಷ ಶಾಂತಕುಮಾರ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷರಾದ ಜಗನ್ನಾಥ, ಆವತಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮುನಿರತ್ನಮ್ಮ, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ, ಇಒ ಶ್ರೀನಾಥ್ ಗೌಡ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳ ಮುಖಂಡರು ಸೇರಿ ನೂರಾರು ಸಾರ್ವಜನಿಕರು ಉಪಸ್ಥಿತರಿದ್ದರು.
ನಾಡಪ್ರಭು ಕೆಂಪೇಗೌಡರ 516 ನೇ ಜಯಂತೋತ್ಸವದಲ್ಲಿ ಆಹಾರ ಸಚಿವ ಕೆಹೆಚ್. ಮುನಿಯಪ್ಪ ಭಾಗಿ.
ಕೆಂಪೇಗೌಡ ಅಭಿವೃದ್ದಿ ಪ್ರಾಧಿಕಾರ ಹಾಗೂ ಕನ್ನಡ ಮತ್ತ ಸಂಸ್ಕೃತಿ ಇಲಾಖೆ ವತಿಯಿಂದ ಇಂದು ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯೋತ್ಸವ ಕ್ರಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,
ಪೂಜ್ಯ ಸ್ವಾಮೀಜಿಗಳಾದ ಶೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಶೀ ಶ್ರೀ ನಂಜಾವದೂತ ಸ್ವಾಮೀಜಿ ರವರ ದಿವ್ಯ ಸಾನಿಧ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವರೊಂದಿಗೆ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಸಚಿವರಾದ ಕೆ.ಹೆಚ್. ಮುನಿಯಪ್ಪ ರವರು ಭಾಗವಹಿಸಿ ಕ್ರಾರ್ಯಕ್ರಮವನ್ನು ಉಘ್ಟಾಟಿಸಿದರು .
ಈ ಸಂದರ್ಭದಲ್ಲಿ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಚಿವರಾದ ಕೃಷ್ಣಬೈರೇಗೌಡ, ಎಚ್.ಸಿ ಮಹದೇವಪ್ಪ , ಶಿವರಾಜ್ ಎಸ್ ತಂಗಡಗಿ,ಕೆಜೆ.ಜಾರ್ಜ್, ಶಾಸಕಾದ ಬಾಲಕೃಷ್ಣ, ಮುನಿರತ್ನ,ಎಸ್.ಟಿ ಸೋಮಶೇಖರ್, ವಿಧಾನಪರಿಷತ್‌ನ ಶಾಸಕರಾದ ನಾಗರಾಜು ಯಾದವ್,ಪುಟ್ಟಣ್ಣ ಬೊಮುಲ್ ನ ಅಧ್ಯಕ್ಷರಾದ ಡಿ.ಕೆ ಸುರೇಶ್ , ಕೆಂಪೇಗೌಡ ಪ್ರಾಧಿಕಾರದ ಸದಸ್ಯರು ಕೆಂಪೇಗೌಡ ಪ್ರಶಸ್ತಿ ಪುರಸ್ಕೃತರು ಉಪಸ್ಥಿತರಿದ್ದರು.